Drought Relief: ಬರ ಪರಿಹಾರ ಕುರಿತು ಬಂತು ಬಿಗ್ ಅಪ್ಡೇಟ್- ಇದನ್ನು ಕೇಳಿದ್ರೆ ರಾಜ್ಯದ ಜನತೆಗೆ ಖುಷಿಯೋ ಖುಷಿ
Karnataka news Big update about drought relief latest news
Drought Relief: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ(Drought Relief) ಉಂಟಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ(State Government)ಕೇಂದ್ರ ಸರ್ಕಾರ 17,901 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದೆ.
ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ, ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾಲ್ಲ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ ರಾಜ್ಯದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಒಳಗೊಂಡ ನಿಯೋಗ ರಾಜ್ಯದ ಭೀಕರ ಪರಸ್ಥಿತಿ ಕುರಿತಂತೆ ಮಾಹಿತಿ ನೀಡಿದ್ದಾರೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಅಂದಾಜು ಪರಿಹಾರ ನಿಧಿಯಲ್ಲಿ 17,9001 ಕೋಟಿ ರೂ. ನಲ್ಲಿ ರಾಜ್ಯ ಸರ್ಕಾರ ಮೊದಲ ಬಾರಿಗೆ 90 ದಿನಗಳ ಬರದಿಂದ ತೀವ್ರವಾಗಿ ಹಾನಿಗೊಳಗಾದ ಕುಟುಂಬಗಳಿಗೆ 12,577 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟ ಪರಿಹಾರವಾಗಿ 44 ಕೋಟಿ ರೂ. ಕೊಡಬೇಕು ಎಂದು ಮನವಿ ಮಾಡಿದ್ದಾರೆ.