Job Openings: ಸರ್ಕಾರದಿಂದ ಭರ್ಜರಿ ಉದ್ಯೋಗಾವಕಾಶ- 5,980 ಡಾಟಾ ಎಂಟ್ರಿ ಆಪರೇಟರ್ ನೇಮಕಕ್ಕೆ ಅಧಿಸೂಚನೆ ಪ್ರಕಟ

State Government job news 5980 Data entry operator recruitment in gram panchyat

Data entry operator recruitment: ಉದ್ಯೋಗಾಂಕ್ಷಿಗಳೇ ಗಮನಿಸಿ, ನಿಮಗೊಂದು ಭರ್ಜರಿ ಗುಡ್ ನ್ಯೂಸ್ (Good News)ಇಲ್ಲಿದೆ. ಸರ್ಕಾರ(State Government)ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಒಂದರಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು (Data Entry Operator)ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸೂಚನೆ ನೀಡಿದೆ.

ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಜಿಲ್ಲಾ ಪಂಚಾಯಿತಿಯ ಸಿಇಒ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಇದರ ಜೊತೆಗೆ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಕನಿಷ್ಠ 16,738 ರೂ. ವೇತನ ನಿಗದಿ ಮಾಡಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸದ ಒತ್ತಡ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ತೀರ್ಮಾನ ಕೈಗೊಳ್ಳಲಾಗಿದೆ

ಇದನ್ನೂ ಓದಿ: ಶಾಲೆಯಿಂದ ಹೊರಗುಳಿದ ಮಕ್ಕಳೇ ಎಚ್ಚೆತ್ತುಕೊಳ್ಳಿ- ಶಿಕ್ಷಣ ಇಲಾಖೆಯಿಂದ ಹೊರಬಿತ್ತು ಮಹತ್ವದ ಆದೇಶ !!

Leave A Reply

Your email address will not be published.