Mangalore: ತಂಡದಿಂದ ಚೂರಿ ಇರಿತ; ಮೂವರಿಗೆ ಗಾಯ ,ಆಸ್ಪತ್ರೆಗೆ ದಾಖಲು!

Dakshina Kannada crime news Stabbing by gang Three injured in Mangalore latest news

Mangalore: ಬುಧವಾರ ರಾತ್ರಿ ಪಾಣೆಮಂಗಳೂರು(Mangalore) ಶಾರದೋತ್ಸವ ಮೆರವಣಿಗೆ ಸಂದರ್ಭ ಎರಡು ತಂಡಗಳ ನಡುವೆ ನಡೆದ ಗಲಾಟೆ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತ (Crime News)ನಡೆದಿದೆ ಎನ್ನಲಾಗಿದೆ.

ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ಜಗಳ (Clash)ನಡೆದಿದ್ದು, ಇದೀಗ, ಅದರ ಮುಂದುವರಿದ ಭಾಗವಾಗಿ ಚೂರಿ ಇರಿತದ ಹಂತದವರೆಗೆ ತಲುಪಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹ ನಡೆದಿದ್ದು ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಗೆ ಕಾರಣವೇನು?
ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಕೆಲವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಧರಿಸಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡದಲ್ಲಿ ಯಾವುದೋ ವಿಚಾರಕ್ಕೆ ಮನಸ್ತಾಪವಾಗಿ ಬಳಿಕ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತಿದೆಯಂತೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಇದರ ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ಕಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್( Banner)ತೆರವು ಮಾಡುತ್ತಿದ್ದಾಗ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ,ಚೂರಿಯಿಂದ ಇರಿದು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ಈ ಘಟನೆಯಿಂದ ಗಾಯಗೊಂಡ ಮೂವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಒಬ್ಬನಿಗೆ ಗಂಭೀರ ಸ್ವರೂಪದ ಗಾಯವಾಗಿರುವ ಹಿನ್ನೆಲೆ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಚೂರಿ ಇರಿತಕ್ಕೊಳಗಾದವರನ್ನು ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಎಂದು ಗುರುತಿಸಲಾಗಿದೆ. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್ ನಿವಾಸಿಗಳಾದ ಚೇತನ್,ಪ್ರಸನ್ನ,ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಹಲ್ಲೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Mylara Lingeshwara Karnika 2023: ಹರಪನಹಳ್ಳಿಯ ಗೊರವಪ್ಪನಿಂದ ಬಂತು ಅಚ್ಚರಿಯ ಕಾರ್ಣಿಕ – ಏನೀ ಹೇಳಿಕೆಯ ಒಳ ಮರ್ಮ?!

Leave A Reply

Your email address will not be published.