Revenue Department: ಬೆಳ್ಳಂಬೆಳಗ್ಗೆಯೇ ರಾಜ್ಯದ ರೈತರಿಗೆ ಕಂದಾಯ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್ !!

Karnataka news good news for farmers from revenue Department

Revenue Department: ಬೆಳ್ಳಂಬೆಳಗ್ಗೆಯೇ ರಾಜ್ಯದ ರೈತರಿಗೆ ಕಂದಾಯ ಇಲಾಖೆಯಿಂದ (Revenue Department) ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿದ್ದು, ಬೆಳೆ ಸಮೀಕ್ಷೆಯ ಕುರಿತ ರೈತರ ಸಂಪೂರ್ಣ ಮಾಹಿತಿ ಮುಂದಿನ 10 ದಿನದಲ್ಲಿ ಮುಗಿಸಿ. ಇದರ ಜೊತೆ ‘ಫ್ರೂಟ್ಸ್’ (Fruits) ತಂತ್ರಾಂಶದಲ್ಲಿ ನಮೂದಿಸಿ, ರೈತರಿಗೆ ನ್ಯಾಯಯುತವಾದ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾದಗಿರಿಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ, ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, ‘ರಾಜ್ಯ ಈ ವರ್ಷ ಇತಿಹಾಸ ಕಾಣದ ಬರಕ್ಕೆ ತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ. ಬೆಳೆ ಕೈಸೇರದೆ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ನಾವು ರೈತರ ಪರ ನಿಲ್ಲಬೇಕಿದೆ’ ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ಯಾದಗಿರಿಯಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೀರಿ. 2015-16ರ ಸಮೀಕ್ಷೆಯ ಪ್ರಕಾರ ಜಿಲ್ಲೆಯಲ್ಲಿ 2.30 ಲಕ್ಷ ರೈತರಿದ್ದಾರೆ. ಆದರೂ ಈಗ ಕೇವಲ 1.80 ಲಕ್ಷ ರೈತರ ಮಾಹಿತಿಯ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈಗಾಗಲೇ ಶೇಕಡಾ 95ರಷ್ಟು ರೈತರ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಆದರೆ, ಯಾದಗಿರಿಯಲ್ಲಿ ಮಾತ್ರ ಶೇ.77 ರಷ್ಟು ಮಾತ್ರ ನಮೂದಿಸಲಾಗಿದೆ. 80 ಸಾವಿರ ರೈತರ ಮಾಹಿತಿ ಅಪ್ಡೇಟ್ ಆಗಿಲ್ಲ. ಮುಂದಿನ 10 ದಿನಗಳಲ್ಲಿ ಶೇ.100 ರಷ್ಟು ರೈತರ ವಿವರವನ್ನು ಇದೇ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಬೇಕು’ ಎಂದು ಕಂದಾಯ ಸಚಿವರು ಗಡುವು ನೀಡಿದ್ದಾರೆ.

ಯಾದಗಿರಿ ಭಾಗದಲ್ಲಿ ಎಲ್ಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದರೂ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಈ ವರ್ಷ ಬರಗಾಲ ಎದುರಾಗಿದೆ. ಮುಂದಿನ ಬೇಸಿಗೆಯಲ್ಲಿ ಯಾದಗಿರಿ ಭಾಗದ ಕೆಲವೆಡೆ ಕುಡಿವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ. ಅಧಿಕಾರಿಗಳು ನೀರಿನ ಸಮಸ್ಯೆ ಸರ್ವೆ ನಡೆಸಿ ನೀರಿನ ಸಮಸ್ಯೆ ಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ. ಯಾವ ಭಾಗದಲ್ಲೂ ಸಾರ್ವಜನಿಕರು ನೀರಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಿ, ಈ ಖರ್ಚಿಗೆ ಜಿಲ್ಲಾಧಿಕಾರಿಗಳ ಖಾತೆಯಿಂದ ಎಸ್‌ಡಿಆರ್‌ಎಫ್ ಹಣ ಬಳಸಿಕೊಳ್ಳಿ ಎಂದು ಸಚಿವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Government Scheme: ರಾಜ್ಯದ ಮಹಿಳೆಯರಿಗೆಲ್ಲಾ ಬಂಪರ್ ಲಾಟ್ರಿ- ಗೃಹಲಕ್ಷ್ಮೀ ಬೆನ್ನಲ್ಲೇ ಹೊಸ ಯೋಜನೆ ಘೋಷಣೆ ಮಾಡಿದ ಸರ್ಕಾರ !!

Leave A Reply

Your email address will not be published.