Guest Lecturer: ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತು ಇಲ್ಲಿದೆ ನೋಡಿ ಬಿಗ್ ಅಪ್ಡೇಟ್ !
Guest Lecturer: ಅತಿಥಿ ಉಪನ್ಯಾಸಕರ (Guest Lecturer) ಸೇವಾ ಭದ್ರತೆ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ. 2023 ಅ.7ರಿಂದ ಕರ್ತವ್ಯಕ್ಕೆ ನೇಮಗಾತಿಗೊಂಡ ಸರ್ಕಾರದ ಮೌಖಿಕ ಆದೇಶದಿಂದ ಹೊರಗುಳಿದ ಕಲ್ಯಾಣ ಕರ್ನಾಟಕ ಭಾಗದ ಅತಿಥಿ ಉಪನ್ಯಾಸಕರಿಗೆ ವೇತನಸಹಿತವಾಗಿ ಹಾಜರಾತಿ ನೀಡುವುದರ ಜೊತೆಯಲ್ಲಿ ಸೇವೆ ಭದ್ರತೆಯನ್ನು ಒದಗಿಸಬೇಕು ಎಂದು ಸರ್ಕಾರವನ್ನು ರಾಜ್ಯಾಧ್ಯಕ್ಷ ಡಾ.ಹನುಮಂತಗೌಡ ಆರ್.ಕಲ್ಮನಿ ಒತ್ತಾಯಿಸಿದರು.
ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ 430ಕ್ಕೂ ಹೆಚ್ಚಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಂದಾಜು 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರ ವಯೋಮಿತಿ ಮೀರಿದೆ. ಈ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು’ ಎಂದು ಒತ್ತಾಯಿಸಿದರು.
ವಯೋಮಿತಿ ಮೀರಿರುವ ಅತಿಥಿ ಉಪನ್ಯಾಸಕರು ವೃತ್ತಿಯಲ್ಲಿ ಪ್ರತಿಭಾವಂತರು, ಅರ್ಹರು ಮತ್ತು ಬೋಧನಾ ಕೌಶಲ ಹೊಂದಿದ್ದಾರೆ. ಇವರು ತಮ್ಮ ಸಾಮರ್ಥ್ಯಕ್ಕೆ ತಕ್ಕ ಹಾಗೆ ಶೈಕ್ಷಣಿಕ ಚಟುವಟಿಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇದ್ದಾರೆ. ಅತ್ಯಂತ ಕಡಿಮೆ ವೇತನ, ಕೆಲಸಕ್ಕೆ ತಕ್ಕ ಸರಿಯಾಗಿ ಗೌರವಧನ ಪಾವತಿಯಾಗದಿರುವುದು, ಸೇವಾ ಅಭದ್ರತೆ ಅತಿಥಿ ಉಪನ್ಯಾಸಕರಿಗೆ ಕಾಡುತ್ತಿದ್ದಾರೆ ಎಂದರು.
ಅತಿಥಿ ಉಪನ್ಯಾಸಕರ ಕೆಲಸವನ್ನು ಕಾಯಂಗೊಳಿಸಲು ಆಗ್ರಹಿಸಿ ಸಂಘಟನೆಯಿಂದ ಈ ಹಿಂದೆ ಬೆಳಗಾವಿಯಲ್ಲಿ ಹೋರಾಟ ನಡೆಸಲಾಗಿತ್ತು. ಸದ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು. ತಮ್ಮ ಚುನಾವಣಿಯ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಅತಿಥಿ ಉಪನ್ಯಾಸಕರನ್ನು ಶೀಘ್ರವಾಗಿ ಕಾಯಂ ಮಾಡಬೇಕು ಬೇಡಿಕೆಗಳನ್ನು ಈಡೇರಿಸಿದ್ದರೆ, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದಲ್ಲಿ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನು ಓದಿ: 7th pay commission: ಸರ್ಕಾರಿ ನೌಕರರೆ ಗಮನಿಸಿ- 7ನೇ ವೇತನ ಆಯೋಗದ ಜಾರಿ ಬಗ್ಗೆ ಗೃಹ ಸಚಿವರಿಂದ ಬಂತು ಭರ್ಜರಿ ಗುಡ್ ನ್ಯೂಸ್ !!