Eshwara Khandre: ನವಿಲುಗರಿ ಸಂಗ್ರಹ, ಮಾರಾಟದ ಕುರಿತು ಮಹತ್ವದ ಆದೇಶ ಹೊರಡಿಸಿದ ಅರಣ್ಯ ಸಚಿವರು !!
Minister Eshwar khandre given statement regarding sale of peacock feather is offence or not
Peacock Feather: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರ ಮೂಲಕ ಆರಂಭವಾದ ಹುಲಿ ಉಗುರಿನ(Tiger Claw) ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ದರ್ಗಾ ಒಳಗೊಂಡಂತೆ ನವಿಲುಗರಿ ( Peacock Feather) ಬಳಕೆ ಕುರಿತಂತೆ ಬಿಜೆಪಿ ನಾಯಕರ ಆರೋಪಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre)ಪ್ರತಿಕ್ರಿಯೆ ನೀಡಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್ 43ರ ಅಡಿಯಲ್ಲಿ ನವಿಲುಗರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತಾಡಿದ್ದು, ಬಿಜೆಪಿಗರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದನ್ನೂ ವಿವಾದ ಮಾಡುತ್ತಾರೆ. ಕಾಯ್ದೆ ಅನುಸಾರ, ನವಿಲುಗರಿಗಳ ಬಳಕೆಗೆ ಯಾವುದೇ ನಿರ್ಬಂಧವಿಲ್ಲ. ಆದರೆ, ನವಿಲುಗರಿ ಮತ್ತು ಅದರಿಂದ ತಯಾರಿಸಿ ಯಾವುದೇ ವಸ್ತುಗಳನ್ನು ವಿದೇಶಗಳಿಗೆ ರಫ್ತು ಮಾಡುವುದನ್ನು ನಿಷೇಧ ಹೇರಲಾಗಿದೆ. ಆದರೆ, ನವಿಲುಗಳಿಂದ ನೈಸರ್ಗಿಕವಾಗಿ ಬಿದ್ದ ಗರಿಗಳನ್ನು ಸಂಗ್ರಹಿಸುವುದು ಮತ್ತು ದೇಶದೊಳಗೆ ಮಾರಾಟ ಮಾಡುವುದು ಕಾನೂನು ಬಾಹಿರವಲ್ಲ ಎಂದು ಸಚಿವರು ತಿಳಿಸಿದ್ದಾರೆ. ಆದರೆ, ನವಿಲುಗಳಿಗೆ ಹಿಂಸೆ ನೀಡಿ ಗರಿಗಳನ್ನು ಕೀಳುವುದು ಶಿಕ್ಷಾರ್ಹ ಅಪರಾದ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.