Voter ID: ವೋಟರ್ ಐಡಿಯಲ್ಲಿ ಹೆಸರು ತಪ್ಪಾಗಿದೆಯೇ ?! ಹೀಗೆ ಮಾಡಿ ಕೂತಲ್ಲೇ ಸರಿಪಡಿಸಿ

National news polls in Karnataka if there is a mistake in voter ID card then correction in this way

Voter ID: ಮುಂಬರುವ ಲೋಕಸಭೆ ಚುನಾವಣೆ-2024 ರ ಪೂರ್ವಭಾವಿ ಸಿದ್ಧತೆ ಶುರುವಾಗಿದ್ದು, ಶುಕ್ರವಾರ ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ತಮ್ಮ ಗುರುತಿನ ಚೀಟಿಯಲ್ಲಿ(Voter Id)ಬದಲಾವಣೆಗಳಿದ್ದರೆ ಅಥವಾ ತಪ್ಪುಗಳಿದ್ದರೆ ಇಂದಿನಿಂದ ಡಿಸೆಂಬರ್ 9 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ.

ಜನವರಿ 05, 2024 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವ ಕುರಿತು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.ಕರಡು ಮತದಾರರ ಪಟ್ಟಿಯನ್ನು ಪಿಡಿಎಫ್ ಮಾದರಿಯಲ್ಲಿ https://ceo.karnataka.gov.in/en ರಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಹೆಸರುಗಳನ್ನು ಪರಿಶೀಲಿಸಬಹುದು. ಮತದಾರರ ಹೆಸರಲ್ಲಿ ತಪ್ಪುಗಳಿದ್ದಲ್ಲಿ ಅಥವಾ ಹೆಸರು ಬಿಟ್ಟು ಹೋಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ಸರಿಪಡಿಸಬಹುದಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರದ ಅಧಿಸೂಚಿತ ನೋಂದಣಾಧಿಕಾರಿ/ಸಹಾಯಕ ನೋಂದಣಾಧಿಕಾರಿಗೆ ನಿಗದಿತ ನಮೂನೆಗಳಲ್ಲಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು.

* ನಮೂನೆ 6: ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ.
* ನಮೂನೆ 6A: ಸಾಗರೋತ್ತರ ಭಾರತೀಯ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅರ್ಜಿ.
* ನಮೂನೆ 6B: ಮತದಾರರ ಪಟ್ಟಿಯಲ್ಲಿನ ವಿವರಗಳ ದೃಢೀಕರಣದ ಉದ್ದೇಶಕ್ಕಾಗಿ ಆಧಾರ್ ಸಂಖ್ಯೆಯ ಅಥವಾ ಇತರೆ 11 ದಾಖಲೆಗಳ ಮಾಹಿತಿ ಪತ್ರ.
* ನಮೂನೆ 7: ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿ ಪ್ರಸ್ತಾಪಿತ ಸೇರ್ಪಡೆಗೆ ಆಕ್ಷೇಪಣೆಗಾಗಿ ಹೆಸರು ಅಳಿಸುವಿಕೆಗೆ ಅರ್ಜಿ ನಮೂನೆ
* ನಮೂನೆ 8: ವಿಳಾಸವನ್ನು ಬದಲಾಯಿಸಲು/ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ/ಬದಲಿ ಮತದಾರರ ಗುರುತಿನ ಚೀಟಿಗಾಗಿ/ವಿಕಲ ಚೇತನ ಮತದಾರರನ್ನುಗುರುತು ಮಾಡಲು ಅರ್ಜಿ ನಮೂನೆ.

ಮೇಲಿನ ಅರ್ಜಿಗಳನ್ನು ಮತದಾರರ ಸೇವಾ ಪೋರ್ಟಲ್ (https://voters.eci.gov.in/) ಅಥವಾ ವೋಟರ್ ಹೆಲ್ಪ್ ಲೈನ್ ಮೊಬೈಲ್ ಅಪ್ಲಿಕೇಶನ್ ಬಳಸಿ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Life Certificate: ಪಿಂಚಣಿದಾರರೇ ಗಮನಿಸಿ- ಮನೆಯಲ್ಲೇ ಕೂತು ‘ಲೈಫ್ ಸರ್ಟಿಫಿಕೇಟ್’ಗೆ ಹೀಗೆ ಅರ್ಜಿ ಸಲ್ಲಿಸಿ

Leave A Reply

Your email address will not be published.