Manaswini Yojana: ಡೈವೋರ್ಸ್ ಪಡೆದ ಮಹಿಳೆಯರಿಗೂ ಭರ್ಜರಿ ಗುಡ್ ನ್ಯೂಸ್ – ಸರ್ಕಾರದಿಂದ ನಿಮಗೂ ಸಿಗಲಿದೆ ತಿಂಗಳ ಮಾಸಾಶನ

Government news manaswini scheme launched pension for unmarried and divorce women

Manaswini Yojana: ಸರ್ಕಾರವು 40 ವರ್ಷದಿಂದ 64 ವರ್ಷದೊಳಗಿನ ವಿಚ್ಚೇದಿತ ಮತ್ತು ಅವಿವಾಹಿತ ಮಹಿಳೆಯರ ಸ್ವಾವಲಂಬಿ ಬದುಕಿಗೆ ಬೆಂಬಲವಾಗಿ ನಿಲ್ಲಬೇಕೆಂಬ ಉದ್ದೇಶದೊಂದಿಗೆ 2013ರಲ್ಲಿ ಮನಸ್ವಿನಿ ಯೋಜನೆಯನ್ನು (Manaswini Yojana) ಜಾರಿಗೆ ತಂದಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಮಾಸಾಶನ ಸೌಲಭ್ಯವನ್ನು ಕಲ್ಪಿಸೋದಾಗಿ ಸರ್ಕಾರ ತಿಳಿಸಿದೆ.

ಹೌದು, ಬಡತನರೇಖೆಗಿಂತ ಕೆಳಗಿರುವ ವಿಚ್ಚೇದಿತ ಮತ್ತು ಅವಿವಾಹಿತ ಮಹಿಳೆಯರಿಗೆ ಮಾಸಿಕ ರೂ.500 ಮಾಸಾಶನ ನೀಡುವ ಈ ಯೋಜನೆಗೆ ಪಸಕ್ತ ಬಜೆಟ್‌ ನಲ್ಲಿ ರೂ.138 ಕೋಟಿ ಅನುದಾನವನ್ನು ನೀಡಲಾಗಿದೆ. ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸಲು ನಮ್ಮ ಸರ್ಕಾರವು ಬದ್ಧವಾಗಿದೆ.

ಅದಲ್ಲದೆ ಮಹಿಳೆಯರ ಸುರಕ್ಷತೆಗಾಗಿ 6 ನೂತನ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಮತ್ತು ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಕಲ್ಪಿಸುವುದಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿ, ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದೇವೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: KPSC ಸಿಟಿಐ ಹುದ್ದೆಗಳ ನೇಮಕ! ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ!!!

Leave A Reply

Your email address will not be published.