ದಕ್ಷಿಣ ಕನ್ನಡ: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆ; ಟೈಪಿಸ್ಟ್‌, ಸ್ಟೆನೋಗ್ರಾಫರ್‌, ಜವಾನ ಹುದ್ದೆಗೆ ಅರ್ಜಿ ಆಹ್ವಾನ!!!

Job openings Mangaluru district court recruitment 2023 latest updates

Mangalore: ಉದ್ಯೋಗಾಂಕ್ಷಿಗಳೇ ಗಮನಿಸಿ(Job Alert), ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನದ(Last Date)ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಶೀಘ್ರ ಲಿಪಿಗಾರ, ಜವಾನ, ಟೈಪಿಸ್ಟ್(Typist), ಸ್ಟೆನೋಗ್ರಾಫರ್(Stenographer Grade III)-, ಜವಾನ ಹುದ್ದೆಗೆಸೇರಿದಂತೆ ಒಟ್ಟು 54 ಹುದ್ದೆಗಳ ನೇಮಕಾತಿ ನಡೆಯಲಿದೆ.

ಹುದ್ದೆಯ ವಿವರ:
ಶೀಘ್ರ ಲಿಪಿಗಾರ ಹುದ್ದೆ- 10
ಬೆರಳಚ್ಚುಗಾರ ಹುದ್ದೆ 6
ಬೆರಳಚ್ಚು-ನಕಲುಗಾರ ಹುದ್ದೆ- 2
ಜವಾನ ಹುದ್ದೆಗಳು -36

ಈ ಹುದ್ದೆಗೆ ಅರ್ಜಿ ಸಲ್ಲಿಸಲು ನವೆಂಬರ್ 6 ಆರಂಭಿಕ ದಿನವಾಗಿದ್ದು, ಡಿಸೆಂಬರ್ 5 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು dk.dcourts.gov.in ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆ:
ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್ 5ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಉಳಿದ ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಹತಾ ಮಾನದಂಡಗಳು:
* ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರ ಲಿಪಿ ಮತ್ತು ಬೆರಳಚ್ಚಿನಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ನಕಲಿಗಾರ ಹುದ್ದೆಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್ ಕರ್ಮಷಿಯಲ್ ಪ್ರಾಕ್ಟೀಸ್ ವಿದ್ಯಾರ್ಹತೆ ಹೊಂದಿರಬೇಕು. .
* ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಮುಗಿಸಿರಬೇಕು.

ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಟ ವಯೋಮಿತಿ 18 ವರ್ಷವಾಗಿದ್ದು, ಗರಿಷ್ಠ 35 ವರ್ಷ ಗಳಾಗಿರಬೇಕು. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೆರಿಟ್, ಟೈಪಿಂಗ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುತ್ತದೆ.ಈ ಕುರಿತ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ dk.dcourts.gov.inಗೆ ಭೇಟಿ ನೀಡಿ.

 

ಇದನ್ನು ಓದಿ: HSRP ನಂಬರ್ ಪ್ಲೇಟ್ ಮನೆಯಲ್ಲಿ ಕೂತೇ ಬುಕ್ ಮಾಡಿಕೊಳ್ಳಿ, ಇಷ್ಟು ಸುಲಭ ಅಂತ ಗೊತ್ತೇ ಇರಲಿಲ್ಲ !

Leave A Reply

Your email address will not be published.