Loan: ವಿದ್ಯಾರ್ಥಿಗಳೇ ನಿಮಗೂ ಸಾಲ ಬೇಕೆ ?! ಇಲ್ಲಿದೆ ನೋಡಿ ಹೆಚ್ಚಿನ ಮಾಹಿತಿ
Karnataka Education news loan for students under Arivu education loan last date to apply
Arivu education loan: ವಿದ್ಯಾರ್ಥಿಗಳೇ ಗಮನಿಸಿ,ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಈಗ, 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ( Arivu education loan) ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಯೋಜನೆ ಅಡಿಯಲ್ಲಿ ಸಿ.ಇ.ಟಿ/ ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ & ಪಿಎಚ್‌ಡಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸಾಲ ಸೌಲಭ್ಯ ಪಡೆಯಲು ಅವಕಾಶವಿದೆ. ಅರ್ಜಿದಾರರು 18 ವರ್ಷ ಮೇಲ್ಪಟ್ಟು, 35 ವರ್ಷದ ಒಳಗಿನವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯ ಒಳಗೆ ಇರಬೇಕು.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ವೈಬ್ ಸೈಟ್ www.kacdc.karnataka.gov.in ನಲ್ಲಿ ನವೆಂಬರ್ 30ರ ಒಳಗೆ ಸಲ್ಲಿಸಬಹುದಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560 032 ಸಂಪರ್ಕಿಸಬಹುದಾಗಿದೆ.ನಿಗಮದ ಜಿಲ್ಲಾ ಕಚೇರಿ ಸಹಾಯವಾಣಿ ಸಂಖ್ಯೆ 080-23539600 ಅಥವಾ 080-23539601 ಗೆ ಸಂಪರ್ಕಿಸಬಹುದು.
ಬೆಂಗಳೂರು ಉತ್ತರ ಜಿಲ್ಲೆ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಈಗ ಮಾಹಿತಿ ನೀಡಿದ್ದಾರೆ. ಅಗತ್ಯ ಇರುವ ಮತ್ತು ಆಸಕ್ತ ಅರ್ಹ ವಿದ್ಯಾರ್ಥಿಗಳು ಈ ಸಾಲ ಸೌಲಭ್ಯದ ಸಹಾಯ ಪಡೆಯಲು ಈ ಮೂಲಕ ತಿಳಿಸಲಾಗಿದೆ.
ವಿದ್ಯಾರ್ಥಿಗಳು ಸಾಲ ಪಡೆಯಲು ಅರ್ಹತಾ ಮಾನದಂಡಗಳು:
* ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು.
* ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಈ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು.
*ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು.
* ಕರ್ನಾಟಕ ರಾಜ್ಯದವರಾಗಿದ್ದು, ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
* ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯ ಜೋಡಣೆ & ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
ಇದನ್ನೂ ಓದಿ: FD ಮೇಲೆ ಭರ್ಜರಿ ಬಡ್ಡಿ ಘೋಷಿಸಿವೆ ಈ ಬ್ಯಾಂಕ್ ಗಳು