Home latest APL-BPL ಕಾರ್ಡ್’ದಾರರ ಗಮನಕ್ಕೆ, ರೇಷನ್ ಕಾರ್ಡ್ ತಿದ್ದುಪಡಿ ಕುರಿತು ಹೊಸ ಅಪ್ಡೇಟ್ ಕೊಟ್ಟ ಸರ್ಕಾರ !!

APL-BPL ಕಾರ್ಡ್’ದಾರರ ಗಮನಕ್ಕೆ, ರೇಷನ್ ಕಾರ್ಡ್ ತಿದ್ದುಪಡಿ ಕುರಿತು ಹೊಸ ಅಪ್ಡೇಟ್ ಕೊಟ್ಟ ಸರ್ಕಾರ !!

Ration Card

Hindu neighbor gifts plot of land

Hindu neighbour gifts land to Muslim journalist

Ration Card: ರಾಜ್ಯ ಸರ್ಕಾರವು ರೇಷನ್ ಕಾರ್ಡ್ ( Ration Card) ದಾರರಿಗೆ ಗುಡ್ ನ್ಯೂಸ್ ಒಂದನ್ನು ನೀಡಿದೆ. ಹೌದು, ಸಾರ್ವಜನಿಕರ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದೀಗ ಪಡಿತರ ಚೀಟಿ ಇರುವ ಎಲ್ಲರಿಗೂ ರೇಶನ್ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ.

ಈ ಹಿಂದೆ ಎರಡು ಬಾರಿ ರೇಶನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದಾಗಲೂ ಸರ್ವರ್ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸರ್ವರ್‌ ಸಮಸ್ಯೆಯನ್ನು ನಿವಾರಿಸಲು ಈ ಬಾರಿ ಹಂತ-ಹಂತವಾಗಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಸದ್ಯ ರೇಶನ್ ಕಾರ್ಡ್ ತಿದ್ದುಪಡಿಯನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು.

ಸದ್ಯ ರೇಶನ್ ಕಾರ್ಡ್ ತಿದ್ದುಪಡಿಯಲ್ಲಿ, ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ ಮಾಡುವುದು, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಬಹುದಾಗಿದೆ. ಮುಖ್ಯವಾಗಿ ಮಹಿಳೆಯನ್ನು ಮನೆಯ ಯಜಮಾನಿ ಎಂದು ಹೆಸರು ಬದಲಾವಣೆ ಮಾಡಲು ಬಯಸುವವರು ಈ ಸಂದರ್ಭದಲ್ಲಿ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ಹೊಸ ವರ್ಷಕ್ಕೆ ಸಿಗ್ತಿದೆ ಬಂಪರ್ ಗಿಫ್ಟ್ – ವೇತನದಲ್ಲಿ ಭರ್ಜರಿ ಏರಿಕೆ