Ration card Good News: BPL ಕಾರ್ಡ್’ದಾರರಿಗೆ ಗುಡ್ ನ್ಯೂಸ್ ಮೇಲೆ ಗುಡ್ ನ್ಯೂಸ್- 5 ಲಕ್ಷದ ವರೆಗೆ ಉಚಿತವಾಗಿ ಸಿಗಲಿದೆ ನಿಮಗೆ ಈ ಸೌಲಭ್ಯ !!

Ration card Good News: ಕರ್ನಾಟಕದ ಎಲ್ಲಾ ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಮತ್ತು ಯೋಗಕ್ಷೇಮವನ್ನು ಸಾಧಿಸಲು, ಪ್ರಾಥಮಿಕ, ದ್ವಿತೀಯ ಮತ್ತು ತೃತೀಯ ಆರೈಕೆಗಳನ್ನು ನೀಡುವುದರ ಮೂಲಕ ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಒದಗಿಸುವ ಹಿನ್ನೆಲೆ “ಆರೋಗ್ಯ ಕರ್ನಾಟಕ’ ಯೋಜನೆಯನ್ನು ಆರಂಭಿಸಲಾಗಿದ್ದು, ಇದರಲ್ಲಿ ವಿವಿಧ ಆರೋಗ್ಯ ಯೋಜನೆಗಳ ಸಂಪನ್ಮೂಲವನ್ನು ನಿಯೋಜಿಸಲಾಗಿದೆ.

 

“ಆರೋಗ್ಯ ಕರ್ನಾಟಕ’ ಯೋಜನೆಯಲ್ಲಿ, ವಾಜಪೇಯಿ ಆರೋಗ್ಯಶ್ರೀ, ಯಶಸ್ವಿನಿ ಯೋಜನೆ, ರಾಜೀವ್ ಆರೋಗ್ಯ ಭಾಗ್ಯ ಯೋಜನೆ, ರಾಷ್ಟ್ರೀಯ ಸ್ವಾಸ್ಥ್ಯ ಭೀಮ ಯೋಜನೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆ, ಇಂದಿರಾ ಸುರಕ್ಷಾ ಯೋಜನೆ ಒಳಗೊಂಡಿದೆ.

ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಈ ಎರಡೂ ಯೋಜನೆಗಳ ಉದ್ದೇಶ. ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ ‘ಆಯುಷ್ಯಾನ್ ಭಾರತ್- ಆರೋಗ್ಯ ಕರ್ನಾಟಕ’ ಎಂದು ಹೆಸರಿಸಲಾಗಿದೆ.ಈ ಯೋಜನೆಯು 2018ರಿಂದ ಹಂತಹಂತವಾಗಿ ಜಾರಿಗೆ ಬರುತ್ತಿದೆ.

ಬಿಪಿಎಲ್‌ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಾಗಲಿದೆ . ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದೆ. ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಚಿಕಿತ್ಸೆಗಳು:
ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು.
ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು.
ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು:
169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆ ಪಡೆಯಬಹುದು.

ಯೋಜನೆಯ ಸೌಲಭ್ಯವನ್ನು, ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಸೈಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.

ಆರೋಗ್ಯಕಾರ್ಡ್:
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯ ಅಡಿಯಲ್ಲಿ ಕಾರ್ಡ್‌ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ರೂ.10/- ಶುಲ್ಕದೊಂದಿಗೆ ನೀಡಲಾಗುತ್ತದೆ. ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ರೂ.35/- ಶುಲ್ಕದೊಂದಿಗೆ ಆರೋಗ್ಯ ಕಾರ್ಡ್ ನೀಡಲಾಗುತ್ತದೆ. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್‌ಗಳನ್ನು ಹಾಜರುಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು.

ಇದಕ್ಕಾಗಿ ಟೋಲ್ ಫ್ರೀ ಸಂಖ್ಯೆ: 1800 425 8330 ಗೆ ಕರೆ ಮಾಡಿ ತಿಳದುಕೊಳ್ಳಬಹುದು. 104 ರ ಕರೆ ಕೇಂದ್ರವನ್ನು ಸಂಪರ್ಕಿಸಿ ಸಹ ಮಾಹಿತಿ ಪಡೆಯಬಹುದು.ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಕಟಿಸಿರುವ ಸಮೀಪದ ನೊಂದಾಯಿತ ಆಸ್ಪತ್ರೆಗಳ ಪಟ್ಟಿಯನ್ನು ನೋಡಬಹುದು.

 

ಇದನ್ನು ಓದಿ: Sea Red: ಕೆಂಪು ಬಣ್ಣಕ್ಕೆ ತಿರುಗುತ್ತಿದೆ ಸಮುದ್ರದ ನೀರು – ದಿಗ್ಭ್ರಮೆಗೊಂಡ ಜನರು, ಅಬ್ಬಬ್ಬಾ ಏನಿದು ವಿಚಿತ್ರ !!

Leave A Reply

Your email address will not be published.