Teacher Recruitment Counselling: ಶಿಕ್ಷಕರ ನೇಮಕಾತಿ ಕುರಿತು ಬಂತು ಬಿಗ್ ಅಪ್ಡೇಟ್- ಕೌನ್ಸೆಲಿಂಗ್ ದಿನಾಂಕ ಪ್ರಕಟ

Karnataka education department announced primary teacher recruitment counselling date

Teacher Recruitment Counselling: ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು ಇದೀಗ ಎಲ್ಲಾ ಅಭ್ಯರ್ಥಿಗಳು ಕೌನ್ಸಲಿಂಗ್’ಗೆ ಎದುರು ನೋಡುತ್ತಿದ್ದಾರೆ. ಅಂತೆಯೇ ಕೌನ್ಸೆಲಿಂಗ್ ಕುರಿತು ಸರ್ಕಾರವು ಇದೀಗ ಬಿಗ್ ಅಪ್ಡೇಟ್ ನೀಡಿದ್ದು ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟ ಮಾಡಿದೆ.

 

ಹೌದು, 2022ರ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ನೇ ತರಗತಿ) ನೇಮಕಾತಿಗೆ(Teacher Recruitment Counselling) ಸಂಬಂಧಪಟ್ಟಂತೆ ಬಾಕಿ ಇದ್ದ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿಯು ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದಂತೆ ಸುತ್ತೋಲೆಯೊಂದನ್ನು ಹೊರಡಿಸಿದ್ದು ವಿವಿಧ ಜಿಲ್ಲೆಗಳ ಕೌನ್ಸಿಲಿಂಗ್‌ ಪ್ರಕ್ರಿಯೆಯ ದಿನಾಂಕ ಘೋಷಣೆ ಮಾಡಿದೆ.

ಅಂದಹಾಗೆ ನೇಮಕಾತಿ-2022ಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲೆಗಳ 371ಜೆ ಹುದ್ದೆಗಳ ಬಗ್ಗೆ ಮಾನ್ಯ ನ್ಯಾಯಾಲಯಗಳಲ್ಲಿ ಪ್ರಕರಣಗಳಿದ್ದ ಕಾರಣದಿಂದ ತಡೆ ಹಿಡಿಯಲಾಗಿದ್ದ ಹುದ್ದೆಗಳನ್ನು ಕಾಯ್ದಿರಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ನ್ನು ಮುಂದುವರೆಸಲಾಗಿತ್ತು. ಆದರೀಗ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ದಿನಾಂಕ 04/11/2023ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದೆ.

ಇನ್ನು ನಿನ್ನೆ ತಾನೆ ಅಂದರೆ ದಿನಾಂಕ 02/11/2023 ರಂದು https://schooleducation.karnataka.gov.in ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ಥಕಟಿಸಲಾಗಿದೆ. ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‌ನ್ನು ದಿನಾಂಕ 04/11/2023 ರಿಂದ ಬೆಳಿಗ್ಗೆ 10.30 ಗಂಟೆಯಿಂದ ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರಿಯವರಾದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರ ಕಛೇರಿಯಲ್ಲಿ ನಡೆಸಲಾಗುವುದು. ಹೀಗಾಗಿ ಆದ್ದರಿಂದ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್‌ನಲ್ಲಿರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸಿಲಿಂಗ್ ಸ್ಥಳದಲ್ಲಿ ಹಾಜರಿಸಬೇಕು.

ಇದನ್ನೂ ಓದಿ: B S Yadiyurappa: ವಿಪಕ್ಷ ನಾಯಕರ ಆಯ್ಕೆ ಕುರಿತು ಬಿಗ್ ಅಪ್ಡೇಟ್ ನೀಡಿದ ಯಡಿಯೂರಪ್ಪ !!

Leave A Reply

Your email address will not be published.