Gruha Lakshmi Yojana Updates: ಗೃಹಲಕ್ಷ್ಮೀ ಹಣ ಪಡೆಯೋ ಎಲ್ಲಾ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ !!

Karnataka news Congress guarantee good news for women those who receiving Gruhalakshmi Yojana money

GruhaLakshmi Yojana money: ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ (Gurha Lakshmi Yojana)ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ (DBT)ಜಮೆ ಮಾಡಲಾಗುತ್ತಿದೆ. ಆದರೆ, ಈ ನಡುವೆ, ಹೆಚ್ಚಿನ ಮಂದಿಗೆ ಎರಡನೇ ಕಂತಿನ ಹಣ ಜಮೆ ಆಗಿಲ್ಲ. ಇದೀಗ, ಸರ್ಕಾರದಿಂದ ಯಜಮಾನಿಯರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.

ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ವಂತಿಕೆ( Gruhalakshmi Yojana money) ಇನ್ನೂ ಶೇ 100 ರಷ್ಟು ಪಾವತಿಯಾಗಿಲ್ಲ. ಈಗ ಹಂತ ಹಂತವಾಗಿ ಹಣ ಪಾವತಿಸಲಾಗುತ್ತಿದೆ. ಎಲ್ಲಾ ಫಲಾನುಭವಿಗಳಿಗೂ ಹಣ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಮಾಹಿತಿ ನೀಡಿದ್ದಾರೆ. ಈ ತಿಂಗಳು ಶೇ.100 ರಷ್ಟು ಗೃಹಲಕ್ಷ್ಮಿ ಹಣ ಪಾವತಿಗೆ ಸರ್ಕಾರ ತೀರ್ಮಾನ ಕೈಗೊಂಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲು ಇರುವ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸುವ ಜೊತೆಗೆ ಶೇ. 100ರಷ್ಟು ಗುರಿ ಮುಟ್ಟಲು ಕ್ರಮ ಕೈಗೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಳ್ಯದ ವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ,ಅತ್ತೆ, ಮಾವ ಸೇರಿ ಐವರ ಬಂಧನ

Leave A Reply

Your email address will not be published.