CM Siddaramaiah: ರಾತ್ರೋ ರಾತ್ರಿ ರಾಜ್ಯದ ಎಲ್ಲಾ ಮಂತ್ರಿಗಳಿಗೆ ಖಡಕ್ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ !!

CM Siddaramaiah: ರಾಜ್ಯದಲ್ಲಿ ಭೀಕರವಾದ ಬರ ತಾಂಡವಾಡುತ್ತಿದೆ. ಬರ ಪರಿಹಾರಕ್ಕೆ ಎಲ್ಲಾ ಜಿಲ್ಲೆಗಳಿಂದ ಬೇಡಿಕೆಗಳು ಹೆಚ್ಚಾಗಿವೆ. ಸರ್ಕಾರವು ಪರಿಹಾರ ಒದಗಿಸಲು ಸಕಲ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಸಿದ್ದರಾಮಯ್ಯನವರು(CM Siddaramaiah) ರಾಜ್ಯದ ಎಲ್ಲಾ ಮಂತ್ರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.

ಹೌದು, ಇಡೀ ರಾಜ್ಯ ಬರದಿಂದ ನಲುಗಿ ಹೋಗಿದ್ದು ಜನರಿಗೆ ನೆರವಾಗುವ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯನವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಎಲ್ಲಾ ಜಿಲ್ಲಾ ಮಂತ್ರಿಗಳು(District ministers)ನವೆಂಬರ್ 15 ರೊಳಗೆ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆದು ಖಡಕ್ ಸೂಚನೆಯನ್ನು ನೀಡಿದ್ದಾರಂತೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬರ ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ(Central government) ಒಂದುರೂಪಾಯಿ ಹಣ ಬಿಡುಗಡೆಯಾಗಿಲ್ಲ. ಹಾಗಂತ ನಾವು ಯಾವುದೇ ಕೆಲಸ ನಿಲ್ಲಿಸಿಲ್ಲ. ನಮ್ಮ ಸರ್ಕಾರದ ವತಿಯಿಂದ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಬರ ಎಂದು ಕುಡಿಯುವ ನೀರಿನ ಪೂರೈಕೆ, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ. ಬರವನ್ನು ಎದುರಿಸಲು ನಮ್ಮ ಸರ್ಕಾರ ಸದಾ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 600 ಕೋಟಿ ರೂ.ಗಳ ಬಿಡುಗಡೆ ನಾವು ಪತ್ರ ಬರೆದ ಮೇಲೆ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33 ಸಾವಿರ ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ. ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ಕೇಂದ್ರ ಸರ್ಕಾರ ತೋರಿದೆ ಎಂದು ದೂರಿದ್ದಾರೆ.

 

ಇದನ್ನು ಓದಿ: PM Modi: ಕರ್ನಾಟಕ ರಾಜಕೀಯದ ಕುರಿತು ಅಚ್ಚರಿಯ ಸ್ಟೇಟ್ಮೆಂಟ್ ಕೊಟ್ಟ ಪ್ರಧಾನಿ ಮೋದಿ !!

Leave A Reply

Your email address will not be published.