Gurantee scheme: ಅನ್ನಭಾಗ್ಯ, ಗೃಹಲಕ್ಷ್ಮೀಯ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ- ಸರ್ಕಾರದಿಂದ ಮಹತ್ವದ ಘೋಷಣೆ !!
Karnataka news good news for annabhagya gruhalakshmi scheme beneficiaries money will be credited within date
Gurantee Scheme: ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ (Gurha Lakshmi Yojana)ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ (DBT)ಜಮೆ ಮಾಡಲಾಗುತ್ತಿದೆ. ಇದೀಗ, ಸರ್ಕಾರ ಅನ್ನಭಾಗ್ಯ(Anna Bhagya Yojana), ಗೃಹಲಕ್ಷ್ಮೀ ಯೋಜನೆಯ(Gurha Lakshmi Scheme) ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಇನ್ನು ಮುಂದೆ ನಿಗದಿತ ಅವಧಿಯೊಳಗೆ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ.
ಸರಕಾರದ ಗ್ಯಾರಂಟಿ ಯೋಜನೆಗಳ( Gurantee scheme ) ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಮಾಸಿಕವಾಗಿ ಪಾವತಿ ಮಾಡುವ ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಹಂತ ಹಂತವಾಗಿ ಪಾವತಿ ಮಾಡಲು ವೇಳಾಪಟ್ಟಿ ಸಿದ್ದ ಪಡಿಸಿ ನಿಗದಿತ ಸಮಯಕ್ಕೆ ತಲುಪಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡುವ ಸಲುವಾಗಿ ಡಿ.ಡಿ.ಓ, ಡಿ.ಬಿ.ಟಿ ಸಲ್ ಮತ್ತು ಖಜಾನೆಗಳಿಗೆ ಯಾವುದೇ ರೀತಿಯ ತಾಂತ್ರಿಕ /ಆಡಳಿತಾತ್ಮಕ ಸಮಸ್ಯೆ ಎದುರಾದರೆ ಬಗೆಹರಿಸಲು ಸೂಚಿಸಲಾಗಿದೆ.ಅದೇ ರೀತಿ, ಪ್ರತಿ ಹಂತದಲ್ಲೂ ಸಮನ್ವಯೀಕರಣ ಸುಲಭಗೊಳಿಸಲು ತಿಳಿಸಲಾಗಿದೆ.
ಈ ಕುರಿತು ಖಜಾನೆ ಆಯುಕ್ತರ ಪ್ರಸ್ತಾವನೆ ಮಾಡಲಾಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಹಾಗೂ ಸಬ್ಸಿಡಿ ಸ್ಟ್ರೀಂಗಳ ಪಾವತಿಗಳನ್ನು ನೇರ ವರ್ಗಾವಣೆ ಮಾಡುವ ವ್ಯವಸ್ಥೆ (Direct Benefit Transfer) ಮೂಲಕ ಫಲಾನುಭವಿಗಳ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ಪಾವತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಡಿ.ಬಿ.ಟಿ ಮತ್ತು ಖಜಾನೆ-2 ರ ಮೂಲಕ ಹಣವನ್ನು ನೇರವಾಗಿ ವರ್ಗಾವಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: 7th pay commission: ಬೆಳ್ಳಂಬೆಳಗ್ಗೆಯೇ ಸರ್ಕಾರಿ ನೌಕರರಿಗೆ ಬಿಗ್ ಶಾಕ್- ಸದ್ಯಕ್ಕಿಲ್ಲ ವೇತನ ಪರಿಷ್ಕರಣೆ !!