Rain Alert in Karnataka : ಇಂದಿನಿಂದ ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ – ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ !!
Rain alert in Karnataka heavy rains yellow alert issued for these district
Rain Alert in Karnataka: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇದೀಗ, ಹವಾಮಾನ ಇಲಾಖೆ (IMD)ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain)ಸಂಭವದ ಕುರಿತು ಮುನ್ಸೂಚನೆ ನೀಡಿದೆ.
ನವೆಂಬರ್ 5 ರಿಂದ 7 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ(Rain Alert in Karnataka)ಜೋರಾಗಿರಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದಿನಿಂದ ನವೆಂಬರ್ 7 ರವರೆಗೆ ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು,ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: New Reservation Policy: ಈ ವರ್ಗದ ಜನರಿಗೆ ಬೊಂಬಾಟ್ ನ್ಯೂಸ್ – ಕೇಂದ್ರದಿಂದ ಹೊಸ ಮೀಸಲಾತಿ ಘೋಷಣೆ !!