Murder Case: ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ; ಕೊಲೆ ರಹಸ್ಯ ಬಯಲು!!!
bengaluru crime news murder case officer prathima and accused found
Pratima Murder: ಗಣಿ ಮತ್ತು ಭೂವಿಜ್ಞಾನ ಡೆಪ್ಯೂಟಿ ಡೆರೆಕ್ಟರ್ ಪ್ರತಿಮಾ ಕೊಲೆ (Pratima Murder) ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಮಾ ಅವರ ಹಳೇ ಡ್ರೈವರ್ ಕಿರಣ್ ಎಂಬಾತನೇ ಈ ಕೊಲೆಯ ಆರೋಪಿ ಎಂದು ವರದಿಯಾಗಿದೆ.
ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್‌ಮೆಂಟ್‌ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ (45) ಅವರ ಬರ್ಬರ ಹತ್ಯೆಯಾಗಿತ್ತು.ದೆ. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ (ನ.4) ರಾತ್ರಿ 8.30ರ ಸುಮಾರಿಗೆ ಹತ್ಯೆ ನಡೆದಿದೆ. ಪ್ರತಿಮಾಳಿಗೆ ಶನಿವಾರ ರಾತ್ರಿ ಅವರ ಸಹೋದರ ಕರೆ ಮಾಡಿದ್ದು, ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಭಾನುವಾರ ಬೆಳಗ್ಗೆ ಮನೆ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು.
ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ ವಿಚಾರಣೆ ವೇಳೆ ಕೊಲೆ ಮಾಡಿರುವುದು ಒಬ್ಬನೇ ಎಂದು ಬಯಲಿಗೆ ಬಂದಿದೆ. ಒಂದು ವಾರದ ಹಿಂದೆ ಪ್ರತಿಮಾ ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎಂದು ಕೆಲಸದಿಂದ ತೆಗೆದು ಹಾಕಿದ್ದರು. ಇದರಿಂದ ಕೋಪಗೊಂಡಿದ್ದ ಕಿರಣ್, ಮನೆಗೆ ಬಂದು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕಿರಣ್‌ನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಲಾಗುತ್ತಿದೆ.
ನ.4 ರಂದು, ರಾತ್ರಿ 8.30 ರ ಸುಮಾರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಿ ಪ್ರತಿಮಾ (45) ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್‌ಮೆಂಟ್‌ನಲ್ಲಿ ಅವರ ಬರ್ಬರ ಹತ್ಯೆಯಾಗಿತ್ತು. ಈ ಕುರಿತು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರತಿಮಾ ಅವರ ಸಹೋದರ ಶನಿವಾರ ರಾತ್ರಿ ಕರೆ ಮಾಡಿದ್ದು, ಕರೆ ಸ್ವೀಕರಿಸದೇ ಇದ್ದಾಗ, ಭಾನುವಾರ ಬೆಳಗ್ಗೆ ಮನೆ ಬಳಿ ಹೋದಾಗ ಈ ಘಟನೆ ಬೆಳಕಿಗೆ ಬಂದಿತ್ತು.
ಇದನ್ನು ಓದಿ: Health Tips: ಈ ಐದು ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನಬೇಡಿ!!