Madhu Bangarappa: ಹಳೆ ಪಿಂಚಣಿ ಜಾರಿ ಕುರಿತು ಬಂತು ಬಿಗ್ ಅಪ್ಡೇಟ್ – ಸಚಿವ ಮಧು ಬಂಗಾರಪ್ಪರಿಂದ ಹಲವು ಗುಡ್ ನ್ಯೂಸ್ ಘೋಷಣೆ !!

Political news Education minister Madhu Bangarappa given statement regarding ops employees recruitment latest updates

Madhu Bangarappa: ರಾಜ್ಯ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಅನುಸಾರ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ತರಲು ಸರ್ಕಾರ ಬದ್ಧವಾಗಿರುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿಕೊಂಡಿದ್ದಾರೆ.

ಹಳೆ ಪಿಂಚಣಿ ಜಾರಿಗೆ (Old Pension Scheme)ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಸಚಿವರು ಇದರ ಜೊತೆಗೆ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ ಎಲ್ಲ ಮಕ್ಕಳಿಗೂ ಸಮವಸ್ತ್ರ ನೀಡಲಾಗುತ್ತದೆ. ಇದಲ್ಲದೇ, 2023ರ ವರೆಗೆ ಅನುದಾನಿತ ಸಂಸ್ಥೆಗಳಲ್ಲಿ ಖಾಲಿಯಾಗಿರುವ ಎಲ್ಲಾ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ, ಸಂಗೀತ, ದೈಹಿಕ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದ ಪೇಸ್ ಕಾಲೇಜು ಆವರಣದಲ್ಲಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ಹಳೆಯ ಪಿಂಚಣಿ ಜಾರಿಗೆ ಒತ್ತಾಯಿಸಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾತನಾಡಿದ್ದಾರೆ.

ಇದನ್ನು ಓದಿ: Daily horoscope: ದೂರದ ಸಂಬಂಧಿಗಳಿಂದ ಶುಭ ಸುದ್ದಿ, ಆರ್ಥಿಕ ಪ್ರಗತಿ ಮೇಲಕ್ಕೇರುವುದರಲ್ಲಿ ಯಾವುದೇ ಸಂಶಯವಿಲ್ಲ ಇಂದು ಈ ರಾಶಿಯವರಿಗೆ!!!

Leave A Reply

Your email address will not be published.