Gruha Lakshmi Yojana: ಸರ್ಕಾರದ ವಿರುದ್ಧ ರೊಚ್ಚಿಗೆದ್ದ ‘ಗೃಹಲಕ್ಷ್ಮೀ’ ಮಹಿಳೆಯರು – ಕಾರಣವೇನು ?!

Gruha Lakshmi Yojana Karnataka apply online latest news

Share the Article

Gruha Lakshmi Yojana Updates: ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ (Gurha Lakshmi Yojana)ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ‌ ನೇರ ವರ್ಗಾವಣೆ (DBT)ಜಮೆ ಮಾಡಲಾಗುತ್ತಿದೆ. ಗೃಹ ಲಕ್ಷ್ಮೀ ಯೋಜನೆ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಮಹಿಳಾ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುತ್ತಿದೆ. ಆದರೆ ಯೋಜನೆ ಜಾರಿಯಾಗಿ ಮೂರು ತಿಂಗಳು ಕಳೆದರೂ ತಾಂತ್ರಿಕ ದೋಷಗಳು ಇನ್ನು ಬಗೆಹರಿದಿಲ್ಲ. ಕಳೆದ ಮೂರು ತಿಂಗಳಲ್ಲಿ ಸುಮಾರು 1.2 ಕೋಟಿ ಮಹಿಳೆಯರು ಪ್ರಯೋಜನಕ್ಕಾಗಿ ನೋಂದಾಯಿಸಿ ಕೊಂಡಿದ್ದಾರೆ. ಆದರೆ ಆಗಸ್ಟ್ ನಿಂದ ಸುಮಾರು 10 ಲಕ್ಷ ಮಹಿಳೆಯರು ಮತ್ತು ಸೆಪ್ಟೆಂಬರ್ನಿಂದ 36 ಲಕ್ಷ ಮಹಿಳೆಯರು ಇನ್ನೂ ಯೋಜನೆಯ ಪ್ರಯೋಜನಗಳನ್ನು ಸ್ವೀಕರಿಸಿಲ್ಲ. ನಮಗೆ ಗೃಹಲಕ್ಷ್ಮೀ ಯೋಜನೆ ಹಣ ಬರುವುದು ಯಾವಾಗ? ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.

ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಯಲಹಂಕ ತಾಲೂಕಿನ ಹಲವು ಹಳ್ಳಿಗಳ ಮಹಿಳೆಯರು ಅರ್ಜಿ ಸಲ್ಲಿಸಲಾಗಿದ್ದು, ಇವರ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗಿದೆ ಎಂದು ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ನಮಗೆ ಯೋಜನೆಯಡಿ ಒಂದು ಬಾರಿಯೂ ಹಣ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವಾಗ ಬಂದರೂ ಅದು ಸರಿಯಲ್ಲ ಇದು ಸರಿಯಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ಫಲಾನುಭವಿಗಳು ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ಗಳನ್ನು ಲಿಂಕ್ ಮಾಡದಿರುವ ಹಿನ್ನೆಲೆ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುಪಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಣಕಾಸು ಇಲಾಖೆಗಳ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಪಾಸ್ಬುಕ್ನಲ್ಲಿರುವ ಹೆಸರಿಗೂ ಮತ್ತು ಆಧಾರ್ ಕಾರ್ಡ್ನಲ್ಲಿರುವ ಹೆಸರಿಗೂ ಹೊಂದಾಣಿಕೆಯಾಗದೆ ಇರುವವರ ಖಾತೆಗೆ ಜಮೆ ಆಗಿಲ್ಲ. ಆರು ತಿಂಗಳಿಗಿಂತ ಹೆಚ್ಚು ಕಾಲ ಬ್ಯಾಂಕ್ ವಹಿವಾಟು ನಡೆಯದಿರುವುದು ಇಲ್ಲವೇ KYC ಮಾಡದಿರುವುದು. ಇದಲ್ಲದೆ, ವಿವಿಧ ಕಾರಣಗಳಿಂದಾಗಿ ಹಣ ವರ್ಗಾವಣೆ ತಡವಾಗಿದೆ ಎಂದು ಹೇಳಿದ್ದಾರೆ. ಈ ಕುರಿತ ಲೋಪದೋಷಗಳನ್ನು ತ್ವರಿತವಾಗಿ ಸರಿಪಡಿಸಲು ಮುಂದಾಗಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಇದನ್ನು ಓದಿ: BBMP New Guidelines: ಪಬ್, ಬಾರ್ ಹಾಗೂ ಹೋಟೆಲ್ ಗಳಿಗೆ ಬಂತು ಹೊಸ ರೂಲ್ಸ್!!

Leave A Reply