Gruhalakshmi Scheme: ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ- ಇನ್ಮುಂದೆ ಪ್ರತೀ ತಿಂಗಳು ಈ ದಿನದೊಳಗೆ ಸಿಗಲಿದೆ 2,000 !!
Gruhalakshmi Scheme money will be transferred to Gruhalakshmi Scheme holders bank account within 15days
Gruhalakshmi Scheme : ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ (Gurha Lakshmi Yojana)ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ (DBT)ಜಮೆ ಮಾಡಲಾಗುತ್ತಿದೆ. ಈ ನಡುವೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಯೋಜನೆಯ ಕುರಿತಂತೆ ಬಿಗ್ ಅಪ್ಡೇಟ್ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಗೃಹ ಲಕ್ಷ್ಮೀ ಯೋಜನೆಯ (Gruhalakshmi Scheme) ಹಣ ಬರದಿದ್ದರೆ ಹೆಲ್ಪ್‌ಲೈನ್‌ಗೆ ಕರೆ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಮಾಹಿತಿ ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು(ನ.08) ಮಲ್ಲೇಶ್ವರಂನ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದಲ್ಲದೇ, ಪ್ರತಿ ಜಿಲ್ಲೆಯಿಂದಲೂ ಈ ಕುರಿತು ಮಾಹಿತಿ ಪಡೆಯುತ್ತಿದ್ದು, ಈ ಹಿನ್ನಲೆ ರಾಜ್ಯದ ಎಲ್ಲಾ ಜಿಲ್ಲೆಗಳ ಸಿಡಿಪಿಒ(CDPO) ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ಜಮೆ ಆಗದಿರುವ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಾಂತ್ರಿಕ ಸಮಸ್ಯೆ, ಇನ್ನೂ ಕೆಲವರ ಆಧಾರ್ ಲಿಂಕ್ ಆಗದಿರುವವರಿಗೆ ಹಣ ತಲುಪಿಲ್ಲ ಎಂದಿದ್ದಾರೆ. ಇನ್ನು 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಹೋಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಈ ನಡುವೆ ದೀಪಾವಳಿ ಹಬ್ಬದ ವೇಳೆಗೆ ಎಲ್ಲರ ಖಾತೆಗೂ ಹಣ ಹೋಗಬೇಕೆಂದು ಮುಖ್ಯ ಮಂತ್ರಿಗಳು ಸೂಚನೆ ನೀಡಿದ್ದಾರೆ.15 ದಿನದೊಳಗೆ ಎಲ್ಲರ ಖಾತೆಗೆ ಹಣ ಜಮೆ ಆಗಲಿದೆ. ಒಂದು ವೇಳೆ, 3 ತಿಂಗಳ ಹಣ ಬಂದಿಲ್ಲ ಎಂದಾದರೆ ಒಟ್ಟಿಗೆ 6 ಸಾವಿರ ರೂಪಾಯಿ ಸಿಗಲಿದೆ ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ‘1902’ ಹೆಲ್ಪ್ ಲೈನ್ ನಂಬರ್ ಇದ್ದು, ಇದಕ್ಕೆ ಕೆರೆಮಾಡಿ ಮಹಿಳೆಯರು ಮಾಹಿತಿಯನ್ನು ಪಡೆದುಕೊಳ್ಳಬಹುದು.