Assistant Professors Order: ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಚಿವರಿಂದ ಸಿಹಿ ಸುದ್ದಿ- ಈ ದಿನದೊಳಗೆ ಕೈ ಸೇರಲಿದೆ ಆದೇಶ ಪತ್ರ

Karnataka job news minister Dr MC Sudhakar order on recruitment of 1242 assistant professors post

Share the Article

Assistant Professors Order: ನವೆಂಬರ್ 7ರಂದು ನಗರದ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಬಳಗವು ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ 2021ನೇ ಸಾಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.

ಹೌದು, ಈಗಾಗಲೇ 2021ನೇ ಸಾಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಡಿಸೆಂಬರ್ ಅಂತ್ಯದೊಳಗೆ ಆದೇಶ ಪತ್ರ (Assistant professors order) ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ನೇಮಕಾತಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಈಗಾಗಲೇ ಸಭೆಗಳನ್ನು ಮಾಡಿ, ವೇಳಾಪಟ್ಟಿಯನ್ನೂ ತಯಾರು ಮಾಡಿಕೊಳ್ಳಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ನೇಮಕಾತಿ ಆದೇಶ ಪ್ರತಿಯನ್ನು ಪಡೆದು ತಾವೆಲ್ಲರೂ ಇಲಾಖೆಗೆ ಬರುತ್ತೀರಿ ಎಂದು ಅಭ್ಯರ್ಥಿಗಳಿಗೆ ಭರವಸೆ ನೀಡಿದರು.

ಇನ್ನು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಇದ್ದಂತಹ ಎಲ್ಲಾ ಅಡೆತಡೆಗಳನ್ನು ಕಾನೂನು ರೀತಿಯಲ್ಲಿ ಬಗೆಹರಿಸಿ ಅಂತಿಮ ಆಯ್ಕೆ ಪಟ್ಟಿಯು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ನೇಮಕಾತಿ ಈ ಹಂತಕ್ಕೆ ತಲುಪಲು ಮುಖ್ಯಮಂತ್ರಿಗಳು ಕಾರಣ ಎಂದರು. ಅವರು ನನ್ನ ಮೇಲಿಟ್ಟ ಭರವಸೆಯಂತೆ ಕೆಲಸ ಮಾಡುತ್ತಿದ್ದೇನೆ. ತಮ್ಮೆಲ್ಲರ ಅಭಿನಂದನೆಗಳು ಅವರಿಗೆ ಸಲ್ಲಬೇಕೆಂದು ಎಂದರು.

ಇದನ್ನೂ ಓದಿ: ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿಕೊಂಡವರಿಗೆ ಭರ್ಜರಿ ಗುಡ್ ನ್ಯೂಸ್ – ಕೃಷಿ ಸಚಿವರಿಂದ ಹೊಸ ಆದೇಶ !!

Leave A Reply