Madhu bangarappa: ಅತಿಥಿ ಶಿಕ್ಷಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ – ಶಿಕ್ಷಣ ಸಚಿವರಿಂದ ಹೊಸ ಘೋಷಣೆ !!
Education news madhu bangarappa says decision to start 500 to 600 KPS schools in Karnataka
Madhu bangarappa: ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರ ಹಿಡಿದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಮಹಾನ್ ಬದಲಾವಣೆಗಳು ನಡೆಯುತ್ತಿವೆ. ಅದರಲ್ಲಿಯೂ ಕೂಡ ಸದಾ ಕ್ರಿಯಾಶೀಲರಾಗಿರುವ ಮಧು ಬಂಗಾರಪ್ಪನವರು(Madhu bangarappa) ಶಿಕ್ಷಣ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಕೂಡ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಅಂತೆಯೇ ಇದೀಗ ಕೆಪಿಎಸ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದ್ದಾರೆ.
ಹೌದು, ರಾಜ್ಯದಲ್ಲಿ 500 ರಿಂದ 600 ಕೆಪಿಎಸ್ ಶಾಲೆಗಳನ್ನು ತೆರೆಯಲು ಹಾಗೂ ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲು ಸರ್ಕಾರ ನಿರ್ಧಾರ ಮಾಡಿದೆ. ಇದಿಷ್ಟೇ ಅಲ್ಲದೆ ಈ ಬಾರಿ 42 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 13 ಸಾವಿರ ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಹೇಳಿದ್ದಾರೆ.
ಅಂದಹಾಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಬುಧವಾರ ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಬದಲಾದ ಪರೀಕ್ಷಾ ಪದ್ಧತಿ ಕುರಿತಾದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ಈ ಎಲ್ಲಾ ಘೋಷಣೆಗಳನ್ನು ಮಾಡಿದ್ದಾರೆ.
KPS ಶಾಲೆ ಎಂದರೇನು?
ಈ ಶಾಲೆಗಳು ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಇರುತ್ತದೆ. ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಭಾಷೆಯಾಗಿ ಕನ್ನಡ ತೆಗೆದುಕೊಳ್ಳುವುದು ಕಡ್ಡಾಯ.
ಇದನ್ನೂ ಓದಿ: Health tips: ಮಹಿಳೆಯರು ಈ ಬಣ್ಣದ ಬ್ರಾ ಧರಿಸೋದ್ರಿಂದ ಸ್ತನ ಕ್ಯಾನ್ಸರ್ ?!