Ration card: ರೇಷನ್ ಕಾರ್ಡ್ ದಾರರಿಗೆ ಕೇಂದ್ರ ದಿಂದಲೂ ಭರ್ಜರಿ ಗುಡ್ ನ್ಯೂಸ್ – ಪ್ರಮುಖ ನಿರ್ಧಾರ ಘೋಷಣೆ !!

National news good news for ration card holders important announcement from central government

Ration Card: ಮೋದಿ ಸರ್ಕಾರವು ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಹೌದು, ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಪರಿಹಾರ ಸಿಗಲಿದೆ. ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಐದು ವರ್ಷಗಳ ಕಾಲ ಈ ಯೋಜನೆ ಲಭ್ಯವಾಗಲಿದೆ ಎಂದು ನವೆಂಬರ್ 4ರಂದು ಮೋದಿ ಈ ಕುರಿತು ಹೇಳಿಕೆ ನೀಡಿದ್ದರು. ಮೋದಿ ಕೈಗೊಂಡಿರುವ ಈ ನಿರ್ಧಾರದಿಂದ ಸುಮಾರು 80 ಕೋಟಿ ಜನರಿಗೆ ಲಾಭವಾಗಲಿದೆ. ಛತ್ತೀಸ್‌ಗಢ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಈ ಘೋಷಣೆ ಮಾಡಿದ್ದಾರೆ.

ಕೊರೊನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ತಂದಿತ್ತು. ಈ ಯೋಜನೆಯನ್ನು ಮಾರ್ಚ್ 2020 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ. ಒಬ್ಬರಿಗೆ 5 ಕೆ.ಜಿ. ಅಂದರೆ ಪಡಿತರ ಚೀಟಿಯಲ್ಲಿ (Ration Card) 5 ಜನ ಇದ್ದರೆ ಅವರಿಗೆ 25 ಕೆಜಿ ಅಕ್ಕಿ ಉಚಿತವಾಗಿ ಸಿಗುತ್ತದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಎಲ್ಲಾ ಫಲಾನುಭವಿಗಳಿಗೆ ಈ ಪ್ರಯೋಜನ ದೊರೆಯುತ್ತದೆ.

2020-21 ರಲ್ಲಿ ಈ ಯೋಜನೆಯನ್ನು ಆರಂಭಿಸಿದ್ದು, ಈ ಯೋಜನೆಯನ್ನು ಹಂತ ಹಂತವಾಗಿ 2023 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಈ ಯೋಜನೆಯನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಇದರಿಂದ ಬಡ ಕುಟುಂಬಕ್ಕೆ ಅನುಕೂಲವಾಗಲಿದೆ.

ಇದನ್ನೂ ಓದಿ : ಇನ್ಮುಂದೆ ಮದುವೆಯಾಗೋರಿಗೆ ಸಿಹಿ ಸುದ್ದಿ- ಬರ್ತಿದೆ ನಿಮಗೂ ಈ ಎಲ್ಲಾ ಹೊಸ ‘ಭಾಗ್ಯ’ !!

Leave A Reply

Your email address will not be published.