Home News ಉಡುಪಿ Udupi: ಉಡುಪಿಯಲ್ಲಿ ಭೀಕರ ಕೊಲೆ; ನಾಲ್ವರ ಬರ್ಬರ ಹತ್ಯೆ!!!

Udupi: ಉಡುಪಿಯಲ್ಲಿ ಭೀಕರ ಕೊಲೆ; ನಾಲ್ವರ ಬರ್ಬರ ಹತ್ಯೆ!!!

Udupi murder case

Hindu neighbor gifts plot of land

Hindu neighbour gifts land to Muslim journalist

Udupi Murder Case: ಉಡುಪಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ(Udupi Murder Case) ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ (Crime news)ಮಾಡಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಕೊಲೆಯಾದವರನ್ನು ಹಸೀನಾ, ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ 8.30 ರ ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಮಾಸ್ಕ್ ಧರಿಸಿಕೊಂಡು ಬಂದ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫಫಾನ್, ಐನಾಜ್ಗೆ ಚಾಕುವಿನಿಂದ ಇರಿದಿದ್ದಾರೆ. ಸದ್ದು ಕೇಳಿ ಆಟವಾಡುತ್ತಿದ್ದ ಆಸೀಮ್ ಹೊರ ಬರುತ್ತಿದ್ದಂತೆ ಇರಿದು ಕೊಂದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.ಮಲ್ಪೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮನೆಯ ಹಾಲ್, ಬೆಡ್‌ ರೂಮ್, ಕಿಚನ್ ಹಾಗೂ ಬಾತ್‌ ರೂಮ್‌ ಸಮೀಪದಲ್ಲಿ ಚೂರಿಯಿಂದ ಇರಿದು ಕೊಲೆಗೈದ ಸ್ಥಿತಿಯಲ್ಲಿ ಮೃತ ದೇಹಗಳು ಪೊಲೀಸರಿಗೆ ದೊರೆತಿದೆ. ಈ ಕೃತ್ಯವನ್ನು ತಡೆಯಲು ಬಂದ ಹಸೀನಾ ಅವರ ಅತ್ತೆಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯು ರಿಕ್ಷಾದಲ್ಲಿ ಬಂದು ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಇದರ ಜೊತೆಗೆ ಹತ್ಯೆ ನಡೆದ ಬಳಿಕ ಆರೋಪಿ ಬೇರೊಂದು ರಿಕ್ಷಾದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು 6 ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Gold ETF: ದೀಪಾವಳಿಗೆ ಚಿನ್ನ ಖರೀದಿಸೋ ಪ್ಲಾನ್ ಉಂಟಾ ?! ಹಾಗಿದ್ರೆ ಇಲ್ಲಿದೆ ನೋಡಿ ಅತ್ಯುತ್ತಮ ಲಾಭ ತರುವ 10 ಗೋಲ್ಡ್ ETF ಗಳು