Udupi: SSLC ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಶಿಕ್ಷಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು !!

Udupi news teacher assult SSLC student pocso case registered latest news

Share the Article

Udupi: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನ ವಿರುದ್ಧ ಉಡುಪಿಯ(Udupi) ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಹೌದು, ಪ್ರೌಢಶಾಲಾ ಶಿಕ್ಷಕನೊಬ್ಬ SSLC ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದ ಮೇಲೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ಎಂದು ಗುರುತಿಸಲಾಗಿದೆ.

ಅಂದಹಾಗೆ ಸೆ. 26ರಂದು ವಿದ್ಯಾರ್ಥಿನಿ ಶಾಲೆಗೆ ಹೋಗಿ ಮನೆಗೆ ಬಂದವಳು ಇನ್ನು ಶಾಲೆಗೆ ಹೋಗುವುದಿಲ್ಲ ಎಂದಿದ್ದಾಳೆ. ಮನೆಯವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ಕೊಠಡಿಗೆ ಕರೆಸಿಕೊಂಡು ಟ್ಯೂಷನ್‌ಗೆ ಯಾಕೆ ಹೋಗುತ್ತೀಯಾ? ನಾನು ಹೇಳಿ ಕೊಟ್ಟಷ್ಟು ಹೇಳಿ ಕೊಡ್ತಾರಾ? ಅವರ ಮನೆಯ ಪಾತ್ರೆ ತೊಳೆಯಲಿಕ್ಕೆ ಹೋಗುವುದಾ ಎಂದು ಕೇಳಿದ್ದಲ್ಲದೇ ಅವಾಚ್ಯ ಪದ ಬಳಸಿ ಅವಮಾನಿಸಿದ್ದಾರೆ ಎಂದಿದ್ದಾಳೆ.

ಅಲ್ಲದೆ ರಾತ್ರಿ ಮತ್ತೆ ವಿಚಾರಿಸಿದಾಗ, ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ತನ್ನ ಮೈಕೈ ಗಲ್ಲ ಮುಟ್ಟಿ ಯಾರಿಗೂ ಹೇಳ್ಬೇಡ. ನಿನಗೆ ನಾನು ಬೇಕಾ? ನಿನ್ನ ತಂದೆ ತಾಯಿ ಬೇಕಾ? ಎಂದು ಲೈಂಗಿಕ ಕಿರುಕುಳ ನೀಡಿರುವುದಾಗಿ ಮನೆಯವರಲ್ಲಿ ತಿಳಿಸಿದ್ದಾಳೆ. ಬಳಿಕ ಊರವರು ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ: Uttar pradesh: ಶಾಲೆಯೊಳಗೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟ ಶಿಕ್ಷಕ- ಇಲ್ಲಿದೆ ಬೆಚ್ಚಿಬೀಳಿಸೋ ವಿಡಿಯೋ!!

Leave A Reply