Yuvanidhi Scheme: ಸದ್ಯದಲ್ಲೇ ಯುವನಿಧಿ ಜಾರಿ – ಪದವೀಧರರೇ, ತಕ್ಷಣ ಈ ದಾಖಲೆಗಳನ್ನು ರೆಡಿ ಮಾಡಿ
Karnataka news Congress guarantees keep these documents ready to get yuvanidhi money
Yuvanidhi Scheme: ರಾಜ್ಯ ಸರ್ಕಾರವು ಈಗಾಗಲೇ ಐದು ಗ್ಯಾರಂಟಿಗಳ ಪೈಕಿ, ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ. ಇದೀಗ ಡಿಪ್ಲೋಮಾ, ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ (Yuvanidhi Scheme) ಜಾರಿಗೆ ತರಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಹೌದು, ಯುವನಿಧಿ ಯೋಜನೆ ಜಾರಿ ಸಂಬಂಧ ರಾಜ್ಯ ಸರ್ಕಾರವು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದೆ ಎನ್ನಲಾಗಿದ್ದು, ಡಿಪ್ಲೋಮಾ ಹಾಗೂ ಪದವೀಧರರಿಗೆ ಮಾಸಿಕ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜನವರಿ ತಿಂಗಳ ಮೊದಲ ವಾರದಲ್ಲೇ ಜಾರಿಗೆ ಬರಲಿದೆ ಎನ್ನಲಾಗಿದೆ.
ರಾಜ್ಯ ಸರ್ಕಾರವು 2024ರ ಜನವರಿ ಮೊದಲ ವಾರವೇ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ . ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.
ಯುವ ನಿಧಿ ನಿರುದ್ಯೋಗ ಭತ್ಯೆ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು:
ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ, ಬ್ಯಾಂಕ್ ಖಾತೆಯ ವಿವರ, ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ, ಭಾವಚಿತ್ರ, ಪದವಿ ಹಾಗೂ ಡಿಪ್ಲಮೋ ಮುಗಿಸಿದವರ ಕೊನೆಯ ವರ್ಷದ ಅಂಕಪಟ್ಟಿ.
ಇದನ್ನೂ ಓದಿ: ಕಾಣಿಯೂರು ಅಬ್ಬಡದಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ