BBK Season 10: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ FIR ದಾಖಲು !! ಕಾರಣ ಇದೆನಾ ?!

Entertainment news BBK Season 10 contestant against Tanisha kuppanda fir registered

BBK Season 10: ಬಿಗ್ ಬಾಸ್ ಕನ್ನಡ ಸೀಸನ್ 10ನ ಸ್ಪರ್ಧಿ ತನಿಷಾ (Tanisha Kuppanda)ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್ಸಿ/ಎಸ್ಟಿ) ದೌರ್ಜನ್ಯ ಕಾಯ್ದೆಯಡಿ ಎಫ್ಐಆರ್ (FIR)ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಹುಲಿ ಉಗುರು ಪ್ರಕರಣದ ಮೂಲಕ ಬಿಗ್ ಬಾಸ್ ಮನೆಯಿಂದ ಜೈಲು ಪಾಲಾದ ವರ್ತೂರ್ ಸಂತೋಷ್ ಬಳಿಕ ಈಗ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜೈಲು ಸೇರ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ. ಮನರಂಜನಾ ಕಾರ್ಯಕ್ರಮವಾಗಿರುವ ಬಿಗ್ ಬಾಸ್ ಕನ್ನಡ ಸೀಸನ್ 10ನ ಸ್ಪರ್ಧಿ ತನಿಷಾ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್ಸಿ/ಎಸ್ಟಿ) ದೌರ್ಜನ್ಯ ಕಾಯ್ದೆಯಡಿ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಡಿಗೆ ಬರುವ ಬೋವಿ ಜನಾಂಗಕ್ಕೆ ಧಾರಾವಾಹಿ ನಟಿ ತನಿಷಾ ಅವರು ಅವಮಾನ ಮಾಡಿದ್ದಾರೆಂದು ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ನಟಿ ತನಿಷಾ ಕುಪ್ಪುಂಡ ವಿರುದ್ದ ದೂರು ದಾಖಲಿಸಿ ಅವರ ವಿರುದ್ಧ ಕ್ರಮವನ್ನು ಕೈಗೊಳ್ಳಬೇಕು ಎಂದು ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂಬ ಆಗ್ರಹ ಕೂಡ ಕೇಳಿಬಂದಿದೆ.

ಇದನ್ನು ಓದಿ: Bangalore: ಎಚ್ ಡಿ ಕೆ ನಿವಾಸದಲ್ಲಿ ಅಕ್ರಮ ವಿದ್ಯುತ್ ಬಳಕೆ – ಯಾಕೆ ಹೀಗೆ ಮಾಡ್ತಾ ಇದ್ದಾರೆ ಕುಮಾರಣ್ಣ?

 

Leave A Reply

Your email address will not be published.