Gruha Lakshmi Scheme: ಯಜಮಾನಿಯರೇ ಈ ಬಾರಿ 2,000 ಬದಲು ನಿಮ್ಮ ಖಾತೆ ಸೇರೋ 6,000 ವನ್ನೂ ಮಿಸ್ ಮಾಡ್ಲೇಬೇಡಿ !! ತಕ್ಷಣ ಈ ಕೆಲಸ ಮಾಡಿ ಪೂರ್ತಿ ಹಣ ಪಡೆಯಿರಿ

Karnataka news good news for womens Gruha lakshmi scheme money rs 6000 credited if you do this work without fail

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯು(Gruha Lakshmi Scheme) ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ (Women Empowerment)ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಕೂಡಾ ಮನೆಯೊಡತಿಗೆ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ.

ಗೃಹ ಲಕ್ಷ್ಮಿ ಯೋಜನೆಯಡಿ (Gruha Lakshmi Scheme)ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. ಒಂದು ಕುಟುಂಬದಲ್ಲಿ ಮನೆಯ ಯಜಮಾನತ್ವವನ್ನು ಮಹಿಳೆ ವಹಿಸಿದ್ದರೆ ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ, ಗೃಹಲಕ್ಷ್ಮಿಯ ಒಂದು ಕಂತಿನ ಹಣ ಜಮಾ ಆಗದೇ ಇದ್ದವರಿಗೆ ಒಟ್ಟಿಗೆ 6 ಸಾವಿರ ಹಣ ಹಾಕುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar)ಮಾಹಿತಿ ನೀಡಿದ್ದಾರೆ.

ನಿಮ್ಮ ಖಾತೆಗೆ ಇನ್ನೂ ಹಣ ಬರದೇ ಇದ್ದಲ್ಲಿ ಹತ್ತಿರದ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ ನಿಮ್ಮ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಸ್ವೀಕೃತಿ, ಬ್ಯಾಂಕ್ ಪಾಸ್ ಬುಕ್ (ವಿವರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯನ್ನು ನೀಡಿ ಅವರ ಬಳಿ ಸಲಹೆಯನ್ನು ಪಡೆದುಕೊಳ್ಳಬೇಕು. ಇನ್ನು ಹಣ ಜಮೆ ಆಗದವರಿಗೆ ಏನು ಸಮಸ್ಯೆಯಾಗಿದೆ ?? ಏನು ಮಾಡಬೇಕು ಎಂಬುದರ ಕುರಿತು ಸಲಹೆ ಪಡೆಯಬಹುದು.

ಖಾತೆಯನ್ನು ಹೊಂದಿರುವ ಮಹಿಳೆಯರು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬೇಕು ಎಂದು ಕೂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹಣ ಜಮಾ ಆಗದೇ ಇದ್ದಲ್ಲಿ ಅಂಚೆ ಕಚೇರಿಯಲ್ಲಿ ಖಾತೆ ತೆರೆದರೆ ಮೂರು ಕಂತಿನ 6000 ರೂ. ಖಾತೆಗೆ ಜಮಾ ಆಗಲಿದೆ. ಮುಂದಿನ 15 ದಿನದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು. ಇನ್ನೂ 15 ದಿನದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Madya Murder Case: ಆಸ್ತಿಗಾಗಿ ಹೆಂಡತಿಯನ್ನೇ ಕೊಂದ ಪಾಪಿ ಗಂಡ – ಕೊಂದದ್ದು ಹೇಗೆಂದು ತಿಳಿದ್ರೆ ನೀವೂ ಭಯಬೀಳುತ್ತೀರಾ !!

Leave A Reply

Your email address will not be published.