HSRP Number Plate: HSRP ನಂಬರ್ ಪ್ಲೇಟ್ ಅಳವಡಿಸೋ ವಾಹನ ಸವಾರರಿಗೆ ಗುಡ್ ನ್ಯೂಸ್ – ಯಾಕೆ ಇದು ಇಷ್ಟೊಂದು ಇಂಪಾರ್ಟೆಂಟ್ !!

Karnataka news hsrp number plate implementation rules why is this necessary here is information

HSRP Number Plate: ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates-HSRP) ಕಡ್ಡಾಯವಾಗಿ ಅಳವಡಿಸಬೇಕು. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate)ಅಳವಡಿಕೆಗೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಲಾಗಿತ್ತು. ವಾಹನ ಸವಾರರು ಎಚ್ಎಸ್ಆರ್ಪಿ ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ albadiosfa ಮಾಡಿದ ಹಿನ್ನೆಲೆ ಈ ನಂಬರ್ ಪ್ಲೇಟ್ ಅಳವಡಿಕೆಗಿದ್ದ ಅವಧಿಯನ್ನು 2024ರ ಫೆಬ್ರವರಿ 17 ರವರೆಗೆ ವಿಸ್ತರಣೆ ಮಾಡಲಾಗಿದೆ.

 

ಸಾರಿಗೆ ಇಲಾಖೆಯಿಂದ ಗುರುತಿಸಿದ ಮೂಲ ವಾಹನ ಉತ್ಪಾದನಕ ಕಂಪನಿಗಳು ಹಾಗೂ ಅಧಿಕೃತ ವಾಹನ ಡೀಲರ್ಗಳು ಮಾತ್ರವೇ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಸಲು ಮಾನ್ಯತೆ ಪಡೆದಿರುತ್ತಾರೆ. ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಜಿಲ್ಲೆಯಲ್ಲಿ 6.16 ಲಕ್ಷ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಸೂಚನೆ ನೀಡಿದ್ದಾರೆ. ಈ ನಂಬರ್ ಪ್ಲೇಟ್ ಅಳವಡಿಸಿದರೆ ಅಪರಾಧ ಕೃತ್ಯಗಳಲ್ಲಿ ವಾಹನ ಬಳಕೆ ಮಾಡಿದರೆ ತಕ್ಷಣ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ. ವಾಹನ ಸವಾರರಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ ಮೂರ್ನಾಲ್ಕು ತಿಂಗಳವರೆಗೆ ಅವಕಾಶವಿದ್ದು, ಇಷ್ಟು ಅವಕಾಶವಿದ್ದರು ಕೂಡ ನಂಬರ್ ಪ್ಲೇಟ್ ಅಳವಡಿಸದೇ ಇದ್ದರೆ ಕಡ್ಡಾಯವಾಗಿ ದಂಡ ವಿಧಿಸಲಾಗುವುದು ಎಂದು ದಾವಣಗೆರೆ ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ ಹೀಗಿದೆ:
# ಮೊದಲಿಗೆ, https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿಕೊಳ್ಳಿ
# ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿಕೊಂಡು, ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿಕೊಳ್ಳಿ.
# HSRP ಅಳವಡಿಕೆಗಾಗಿ ನಿಮ್ಮ ಅನುಕೂಲದ ಅನುಸಾರ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
# HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ .
# ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನೆ ಮಾಡಲಾಗುತ್ತದೆ.
# ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಹಾಗೂ ಸಮಯವನ್ನು ಆಯ್ಕೆಮಾಡಿಕೊಳ್ಳಿ.
# ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ, ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ಇದನ್ನೂ ಓದಿ: Guest Faculty: ಅತಿಥಿ ಉಪನ್ಯಾಸಕರಿಗೆ ದೀಪಾವಳಿ ಧಮಾಕ – ಗೌರವ ಧನ ಬಿಡುಗಡೆ ಕುರಿತು ಇಲ್ಲಿದೆ ಬಿಗ್ ಅಪ್ಡೇಟ್ !!

5 Comments
  1. MichaelLiemo says

    buy ventolin: buy albuterol inhaler – ventolin tablets uk
    ventolin for sale online

  2. Josephquees says

    neurontin india: neurontin prescription cost – medicine neurontin 300 mg

  3. Josephquees says

    rybelsus: cheap Rybelsus 14 mg – buy rybelsus

  4. Timothydub says

    indian pharmacy online: Online medication home delivery – indian pharmacy

  5. Timothydub says

    indian pharmacy paypal: best india pharmacy – best india pharmacy

Leave A Reply

Your email address will not be published.