Free Ration: ಈ ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ – ಉಚಿತ ರೇಷನ್ ವಿತರಣೆ ಮಾಡುವ ಬಗ್ಗೆ ಕೇಂದ್ರದಿಂದ ಹೊಸ ಘೋಷಣೆ !!

National news PMGKAY free ration scheme extended 5 years Central Government announcement

PMGKAY: ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಉಚಿತ ಪಡಿತರ ಯೋಜನೆಯನ್ನು ಐದು ವರ್ಷಗಳವರೆಗೆ ಉಚಿತ ರೇಷನ್ (Free Ration)ನೀಡುವ ಘೋಷಣೆ ಮಾಡಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ ಎಂದು ಕೇಂದ್ರ ಸರ್ಕಾರ (Central Government)ತಿಳಿಸಿದೆ. 80 ಕೋಟಿಗೂ ಹೆಚ್ಚು ಜನರು ಈ ಯೋಜನೆಯ ಲಾಭ ಪಡೆಯುತ್ತಿದ್ದು, ತಮ್ಮ ಸರ್ಕಾರದ ಉಚಿತ ಪಡಿತರ ಯೋಜನೆ PMGKAY ಅನ್ನು ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಆಹಾರ ಸಚಿವಾಲಯ “ಜನವರಿ 1, 2023 ರಿಂದ ಮುಂದಿನ ಒಂದು ವರ್ಷದವರೆಗೆ PMGKAY ಅಡಿಯಲ್ಲಿ ಅಂತ್ಯೋದಯ ಅನ್ನ ಯೋಜನೆ (AAY) ಕುಟುಂಬಗಳು ಮತ್ತು ಆದ್ಯತಾ ಕುಟುಂಬಗಳ (PHH) ಫಲಾನುಭವಿಗಳಿಗೆ ಕೇಂದ್ರವು ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ” ಎಂದು ಮಾಹಿತಿ ನೀಡಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ, 2020 ರಲ್ಲಿ ಹೆಚ್ಚುವರಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲು ಪ್ರಾರಂಭಿಸಲಾದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA)ಯೊಂದಿಗೆ PMGKAY ಅನ್ನು ವಿಲೀನಗೊಳಿಸಲು ಕೇಂದ್ರ ತೀರ್ಮಾನ ಕೈಗೊಂಡಿದೆ. ಬಡ ಫಲಾನುಭವಿಗಳ ಆರ್ಥಿಕ ಹೊರೆಯನ್ನು ನಿವಾರಿಸಲು ಮತ್ತು ರಾಷ್ಟ್ರವ್ಯಾಪಿ ಏಕರೂಪತೆ ಮತ್ತು NFSA (ವರ್ಷ 2013) ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: KSRTC: ಬೆಳ್ಳಂಬೆಳಗ್ಗೆಯೇ KSRTC ನೌಕರರಿಗೆ ಬಂಪರ್ ಗುಡ್ ನ್ಯೂಸ್ – ತುಟ್ಟಿಭತ್ಯೆಯಲ್ಲಿ ಭರ್ಜರಿ ಏರಿಕೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

Leave A Reply

Your email address will not be published.