SBI ಬ್ಯಾಂಕಿನಲ್ಲಿ 8,283 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ – ಇಲ್ಲಿದೆ ಸಂಪೂರ್ಣ ಮಾಹಿತಿ

bank job news SBI Junior Associate recruitment notification 2023 apply for 8283 vacancies

SBI Junior Associate recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)2023ನೇ ಸಾಲಿನ 8283 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ(SBI Recruitment 2023) ಅಧಿಕೃತ ಅಧಿಸೂಚನೆ ಹೊರಡಿಸಿದ್ದು ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.

ಭಾರತೀಯ ಸ್ಟೇಟ್‌ ಬ್ಯಾಂಕ್‌ ಕ್ಲರ್ಕ್‌ ಅಥವಾ ಜ್ಯೂನಿಯರ್‌ ಅಸೋಸಿಯೇಟ್ಸ್‌(Junior Associates) ವಾಣಿಜ್ಯ ಹಾಗೂ ಗ್ರಾಹಕ ಸಹಕಾರ ಹುದ್ದೆಗಳಿಗೆ ನೇಮಕಕ್ಕೆ( SBI Junior Associate recruitment) ಸಂಬಂಧಿಸಿದಂತೆ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ.

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದ್ದರೆ ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ sbi.co.in ಮೂಲಕ ಅರ್ಜಿ ಸಲ್ಲಿಸಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ನವೆಂಬರ್ 17, 2023 ಆರಂಭಿಕ ದಿನಾಂಕವಾಗಿದೆ. ಡಿಸೆಂಬರ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಹತಾ ಮಾನದಂಡಗಳು
*ಅಧಿಕೃತ ಅಧಿಸೂಚನೆಯ ಅನುಸಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ಅರ್ಹತೆಯನ್ನು ಒಳಗೊಂಡಿರುತ್ತದೆ.
*ಅಭ್ಯರ್ಥಿಯು ಅವರು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ 20 ರಿಂದ 28 ವರ್ಷಗಳು.

ಎಸ್ಬಿಐ ಕ್ಲರ್ಕ್ ನೇಮಕಾತಿಯ ಅನುಸಾರ ಆಯ್ಕೆ ಪ್ರಕ್ರಿಯೆಯು ಎರಡು ಹಂತದಲ್ಲಿರಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ 2024ರ ಜನವರಿಯಲ್ಲಿ ಪ್ರಿಲಿಮ್ಸ್‌ ಪರೀಕ್ಷೆಗಳನ್ನು ನಡೆಸಲಾಗುತ್ತದೆ. 2024ರ ಫೆಬ್ರವರಿಯಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ಜನವರಿ 2024 ರಲ್ಲಿ ಪೂರ್ವಭಾವಿ ಪರೀಕ್ಷೆಯಲ್ಲಿ ನಡೆಯಲಿದೆ. ಮುಖ್ಯ ಪರೀಕ್ಷೆಯಲ್ಲಿ ಫೆಬ್ರವರಿ 2024 ನಡೆಯಲಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಎಸ್ಬಿಐ ಕ್ಲರ್ಕ್ ನೇಮಕಾತಿ 2023 ಗಾಗಿ ಅಭ್ಯರ್ಥಿಗಳು ಅಧಿಕೃತ ಎಸ್ಬಿಐ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅವರು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿಯಿದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂ., ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿಯು19,900 ಮೂಲ ವೇತನ ಹಾಗೂ ಎರಡು ಇನ್ಕ್ರಿಮೆಂಟ್ ಇರಲಿದೆ. ಈ ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ SBI ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ

SBI Junior associates recruitment 2023 notification

SBI Junior Associates Recruitment 2023-apply online

ಇದನ್ನೂ ಓದಿ: ಕರ್ನಾಟಕ ಬಿಜೆಪಿ ಸಂಸದ ಪುತ್ರನ ವಿರುದ್ದ ಲೈಂಗಿಕ ಸಂಬಂಧ, ಪ್ರೀತಿ ಮೋಸಗಳ ಆರೋಪ- ಯುವತಿಯಿಂದ ದೂರು ದಾಖಲು

Leave A Reply

Your email address will not be published.