Bellary Crime News: ಕರ್ನಾಟಕ ಬಿಜೆಪಿ ಸಂಸದ ಪುತ್ರನ ವಿರುದ್ದ ಲೈಂಗಿಕ ಸಂಬಂಧ, ಪ್ರೀತಿ ಮೋಸಗಳ ಆರೋಪ- ಯುವತಿಯಿಂದ ದೂರು ದಾಖಲು
Bellary crime news Bengaluru women registered cheating case against MP Devendra son ranganath
Bellary Crime News: ಬಳ್ಳಾರಿ (Bellary) ಬಿಜೆಪಿ (BJP) ಸಂಸದ ದೇವೇಂದ್ರಪ್ಪ ಅವರ ಮಗನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ (Bellary Crime News)ಕೇಳಿ ಬಂದಿದೆ. ಮೈಸೂರಿನ(Myuru) ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ.
ಬೆಂಗಳೂರು ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಒಂದೂವರೆ ವರ್ಷದ ಹಿಂದೆ ಪಾರ್ಟಿಯೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್ ಪಾರ್ಟಿಯೊಂದರಲ್ಲಿ ಸ್ನೇಹಿತರ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿರುವ ಬಳಿಕ ಆಕೆಗೆ ಮದುವೆಯಾಗುವುದಾಗಿ ನಂಬಿಸಿ ಕಳೆದ ಜನವರಿಯಲ್ಲಿ ಮೈಸೂರಿನ ಹೋಟೇಲ್ ನಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದಾದ ನಂತರ ಮದುವೆಯಾಗುವಂತೆ ಯುವತಿ ಪಟ್ಟು ಹಿಡಿದ ಹಿನ್ನೆಲೆ ಆತ ಅವನಿಂದ ಅಂತರ ಕಾಯ್ದುಕೊಂಡಿದ್ದಾರೆ. ಹೀಗಾಗಿ, ಯುವತಿ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ ಎಂದು ತಿಳಿದುಬಂದಿದೆ.
ಈ ನಡುವೆ, ರಂಗನಾಥ್ ಅವರು ಕೂಡ ಪ್ರತಿದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ರಂಗನಾಥ್ ಅವರು 15 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಯುವತಿ ವಿರುದ್ಧ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆ ಪೊಲೀಸರು ಬೆಂಗಳೂರು ಮೂಲದ ಯುವತಿ ಹಾಗೂ ಶ್ರೀನಿವಾಸ್ ಎನ್ನುವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ ಎನ್ನಲಾಗಿದೆ. ಇದಲ್ಲದೇ, ರಂಗನಾಥ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಇನ್ನು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: BBK Season 10: ಬಿಗ್ ಬಾಸ್ ಮನೆಯಲ್ಲಿ ತನಿಷಾ ಬಂಧನ ?! SP ಹೇಳಿದ್ದೇನು ?