Madhu Bangarappa: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್‌ ಸಿಹಿ ಸುದ್ದಿ; ಸಚಿವ ಮಧು ಬಂಗಾರಪ್ಪರಿಂದ ಮತ್ತೊಂದು ಮಹತ್ವದ ಘೋಷಣೆ!!!

Karnataka education news Minister madhu bangarappa give another good news to government school students

Madhu Bangarappa: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಸುದ್ದಿಗಾರರ ಜೊತೆ ಮಹತ್ವ ವಿಚಾರ ಒಂದನ್ನು ಪ್ರಸ್ತಾಪ ಮಾಡಿದ್ದು, ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಹೌದು, ಮುಂದಿನ ಐದು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ. ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೆ ಪಿ ಎಸ್ ಗಳಾಗಿ ಪರಿವರ್ತಿಸಲು ಸಿದ್ಧತೆ ನಡೆದಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa)ತಿಳಿಸಿದರು.

ವಿದ್ಯಾರ್ಥಿಗಳನ್ನು ಶಾಲೆಯತ್ತ ಸೆಳೆಯಲು ಪ್ರತಿ ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ 3 ಸಾವಿರ ಕೆಪಿಎಸ್ ಅನ್ನು ಮುಂದಿನ 5 ವರ್ಷಗಳಲ್ಲಿ ಆರಂಭಿಸುತ್ತೇವೆ ಎಂದರು. ಶಾಲಾ ಮಕ್ಕಳಿಗೆ ಶೂ ಬದಲಿಗೆ ಚಪ್ಪಲಿ ಕೊಟ್ಟ ಪ್ರಕರಣದಲ್ಲಿ ಯಾವುದೇ ತಪ್ಪು ನಡೆದಿದ್ದರೆ, ಅಥವಾ ಯಾರೇ ತಪ್ಪು ಮಾಡಿದ್ದರೂ, ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ: ಆಧಾರ್ ಕಾರ್ಡ್ ಕುರಿತು ಹೊಸ ಅಪ್ಡೇಟ್ ಕೊಟ್ಟ ಕೇಂದ್ರ !! ತಕ್ಷಣ ಹೀಗೆ ಮಾಡಿ

Leave A Reply

Your email address will not be published.