Madhu bangarappa: ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್- ಶಿಕ್ಷಣ ಸಚಿವರಿಂದ ಹೊರಬಿತ್ತು ಹೊಸ ಘೋಷಣೆ !!

Karnataka education news ragi malt to school students in government school says minister madhu bangarappa

Madhu bangarappa: ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರ ಹಿಡಿದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತರಲು ಸಾಕಷ್ಟು ಶ್ರಮಿಸುತ್ತಿದೆ. ಅದರಲ್ಲಿಯೂ ಕೂಡ ಸದಾ ಕ್ರಿಯಾಶೀಲರಾಗಿರುವ ಮಧು ಬಂಗಾರಪ್ಪನವರು(Madhu bangarappa) ಶಿಕ್ಷಣ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಕೂಡ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಅಂತೆಯೇ ಇದೀಗ ಮತ್ತೊಂದು ಹೊಸ ಯೋಜನೆಯನ್ನು ಶಿಕ್ಷಣ ಸಚಿವರು ಘೋಷಿಸಿದ್ದಾರೆ.

ಹೌದು, ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆಯನ್ನು ನಿವಾರಿಸೋ ನಿಟ್ಟಿನಲ್ಲಿ ಶೀಘ್ರವೇ ಪೌಷ್ಠಿಕಾಂಶ ಯುಕ್ತ ಆಹಾರ ನೀಡೋದಾಗಿ ಸರ್ಕಾರ ಹೇಳಿತ್ತು. ಅದರ ಭಾಗವಾಗಿ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ವಿತರಿಸೋದಕ್ಕೆ ನಿರ್ಧರಿಸಿದೆ. ಹೀಗಾಗಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಗುರುವಾರ ಘೋಷಣೆ ಮಾಡಿದ್ದಾರೆ.

ಅಂದಹಾಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ. ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆ ರಾಗಿ ಮಾಲ್ಟ್ (Ragi Malt) ಕೊಡುವ ನಿರ್ಧಾರ ಮಾಡಿದ್ದೇವೆ. ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟ, ಚಿಕ್ಕಿ-ಬಾಳೆಹಣ್ಣು ನೀಡಲಾಗುತ್ತಿದೆ. ಇನ್ಮುಂದೆ ರಾಗಿ ಮಾಲ್ಟ್ ಕೂಡ ನೀಡವಾಗುವುದು. ಡಿಸೆಂಬರ್ ನಿಂದಲೇ ಇದು ಜಾರಿಯಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Dakshina kannada: ದಕ್ಷಿಣ ಕನ್ನಡದ ಐವರು ಬಜರಂಗದಳದ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್

Leave A Reply

Your email address will not be published.