HSRP ನಂಬರ್ ಪ್ಲೇಟ್ ಅಳವಡಿಕೆ ವಿಚಾರ – ಸಾರಿಗೆ ಇಲಾಖೆಯಿಂದ ಬಂತೊಂದು ಹೊಸ ಆದೇಶ !!
HSRP Number Plate: ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates-HSRP) ಕಡ್ಡಾಯವಾಗಿ ಅಳವಡಿಸಬೇಕು. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate)ಅಳವಡಿಕೆಗೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಲಾಗಿತ್ತು. ವಾಹನ ಸವಾರರು ಎಚ್ಎಸ್ಆರ್ಪಿ ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ ಅಳವಡಿಸಿದ ಮಾಡಿದ ಹಿನ್ನೆಲೆ ಈ ನಂಬರ್ ಪ್ಲೇಟ್ ಅಳವಡಿಕೆಗಿದ್ದ ಅವಧಿಯನ್ನು 2024ರ ಫೆಬ್ರವರಿ 17 ರವರೆಗೆ ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯದಲ್ಲಿ 01-04- 2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ 17-11-2023 ರೊಳಗಾಗಿ ಹೆಚ್.ಎಸ್.ಆರ್.ಪಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಅದೇಶ ಹೊರಡಿಸಿದೆ. ಇದೀಗ ಸರ್ಕಾರದ ಅಧಿಸೂಚನೆ ಅನುಸಾರ 17-02- 2024ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿರುತ್ತದೆ. 01-04-2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳ ಮಾಲೀಕರು 17-02-2024 ರೊಳಗಾಗಿ ತಮ್ಮ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ಅಳವಡಿಕೆ ಮಾಡಿಕೊಳ್ಳುವಂತೆ ಈ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ. ನಿಗದಿತ ದಿನಾಂಕದೊಳಗೆ ಹೆಚ್.ಎಸ್.ಆರ್.ಪಿ. ಯನ್ನು ಅಳವಡಿಸದಿದ್ದಲ್ಲಿ ಸರ್ಕಾರಿ ಅಧಿಸೂಚನೆ ಅನುಸಾರ 21-09-2019 ರ ಪ್ರಕಾರ ಮತ್ತು ಕಾಲ ಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳ ಅನುಸಾರ ದಂಡವನ್ನು ವಿಧಿಸಲಾಗುತ್ತದೆ.