Home latest Electricuted : ತವರು ಮನೆಗೆ ಹೊರಟವಳು ಜವರಾಯನ ಮನೆ ಅತಿಥಿಯಾದಳು : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎರಡು...

Electricuted : ತವರು ಮನೆಗೆ ಹೊರಟವಳು ಜವರಾಯನ ಮನೆ ಅತಿಥಿಯಾದಳು : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿ! ವೀಡಿಯೋ ವೈರಲ್‌!

Electrocuted

Hindu neighbor gifts plot of land

Hindu neighbour gifts land to Muslim journalist

Electrocuted : ಬೆಂಗಳೂರಿನಲ್ಲಿ ತನ್ನ ಪುಟ್ಟ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ವಿದ್ಯುತ್‌ ಆಘಾತಕ್ಕೆ (Electrocuted) ಒಳಗಾಗಿ ಮಗುವಿನೊಂದಿಗೆ ಸುಟ್ಟು ಕರಕಲಾದ (Mother and Child dead) ಘಟನೆ ವರದಿಯಾಗಿದೆ. ಬೆಸ್ಕಾಂ ಅಧಿಕಾರಿಗಳ‌ ನಿರ್ಲಕ್ಷ್ಯ (BESCOM Negligence) ಕ್ಕೆ ತಾಯಿ-ಮಗು ಬಲಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮೃತಪಟ್ಟ ದುರ್ದೈವಿಗಳನ್ನು ತಾಯಿ ಸೌಂದರ್ಯ ಮತ್ತು ಪುಟ್ಟ ಮಗಳು ಲಿಯಾ ಎಂದು ಗುರುತಿಸಲಾಗಿದೆ. ವೈಟ್‌ ಫೀಲ್ಡ್‌ ಸಮೀಪದ ಓಫಾರ್ಮ್‌ ಸರ್ಕಲ್‌ ಬಳಿ (Mother and daughter dead Electricution)ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಸೌಂದರ್ಯ ಅವರು ತಮ್ಮ ಪತಿ ಸಂತೋಷ್ ಮತ್ತು ಮಗುವಿನೊಂದಿಗೆ ತಮಿಳುನಾಡಿನ ತಾಯಿ ಮನೆಗೆ ಹೋಗಿ ಹಿಂತಿರುಗಿದ ಸಂದರ್ಭ ಘಟನೆ ನಡೆದಿದೆ.

ಸೌಂದರ್ಯ ಪುಟ್ಟ ಮಗುವನ್ನು ಕಂಕುಳಲ್ಲಿ ಇಟ್ಟುಕೊಂಡು ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ಓಫಾರ್ಮ್ ಸರ್ಕಲ್ ಬಳಿ ಮನೆ ಕಡೆಗೆ ತೆರಳುತ್ತಿದ್ದರು. ಈ ಸಂದರ್ಭ ರಸ್ತೆ ಬದಿ ತುಂಡಾಡಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿಯನ್ನ(Mother and child Electricuted)ತುಳಿದ ಪರಿಣಾಮ ಒಮ್ಮೆಗೇ ವಿದ್ಯುತ್‌ ಅವರ ದೇಹದಲ್ಲಿ ಪ್ರವಹಿಸಿ ತಾಯಿ ಮತ್ತು ಮಗು ಸ್ಥಳದಲ್ಲೇ ಸುಟ್ಟು ಕರಕಲಾಗಿ ಹೋದ ದಾರುಣ ಘಟನೆ ವರದಿಯಾಗಿದೆ. ಪತಿ ಪಕ್ಕದಲ್ಲೇ ಇದ್ದರೂ ಕೂಡ ಏನು ಮಾಡಲಾಗದ ಸ್ಥಿತಿಯಲ್ಲಿದ್ದರು ಎನ್ನಲಾಗಿದೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಘಟನೆ ಸಂಬಂಧ ಪೊಲೀಸರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.ಸ್ಟೇಷನ್ ಆಪರೇಟರ್ ಮಂಜುನಾಥ್ ಮೇಲೆ ಐಪಿಸಿ ಸೆಕ್ಷನ್‌ 304 A ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Vinod Thomas Death: ಕಾರಿನೊಳಗೆ ಶವವಾಗಿ ಪತ್ತೆಯಾದ ಮಾಲಿವುಡ್ ನಟ: ಕಾರಣ ನಿಗೂಢ!