Savarkar Photo Controversy:ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ವಿಚಾರ : ಭಾರೀ ಕುತೂಹಲ ಮೂಡಿಸಿದ ಕಾಂಗ್ರೆಸ್ ನಡೆ!?

Congress Government: ಕಳೆದ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸುವರ್ಣಸೌಧದ ಅಸೆಂಬ್ಲಿ ಹಾಲ್‌ನಲ್ಲಿ ಸಾವರ್ಕರ್ ಫೋಟೋವನ್ನು ಅಳವಡಿಸಲಾಗಿತ್ತು. ಸರ್ಕಾರದ ಈ ನಡೆ ಭಾರೀ ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ (Congress Government)ಸದನದ ಹೊರಗೆ ಕೂಡ ಪ್ರತಿಭಟನೆಯನ್ನು ನಡೆಸಿತ್ತು. ಸಾವರ್ಕರ್ ಫೋಟೋವನ್ನು ತೆರವುಗೊಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು. ಆದರೆ ಈಗ ಆಡಳಿತದಲ್ಲಿ ಕಾಂಗ್ರೆಸ್‌ ಪಕ್ಷವಿದ್ದರೂ ಕೂಡ ಸಾವರ್ಕರ್ ಫೋಟೋವನ್ನು ತೆರವು ಮಾಡುವುದೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಿಗೂ ಕಾಡುತ್ತಿದೆ.

ಈ ನಡುವೆ ಡಿಸೆಂಬರ್ 4 ರಿಂದ ಬೆಳಗಾವಿ ಅಧಿವೇಶನ ಶುರುವಾಗಲಿದೆ. ಅಸೆಂಬ್ಲಿ ಹಾಲ್‌ನಲ್ಲಿ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಫೋಟೋವನ್ನು ಅನಾವರಣ ಮಾಡಲಾಗುವ ಕುರಿತು ಅಂದಿನ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದ್ದರು. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರನ್ನು ಆಹ್ವಾನ ಮಾಡಲಾಗಿದ್ದು, ಆದರೆ ಇವರಿಬ್ಬರ ಫೋಟೋಗಳ ಜೊತೆಗೆ ಸಾವರ್ಕರ್ ಫೋಟೋವನ್ನು ಕೂಡಾ ಅನಾವರಣ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅನಾವರಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರಾಗಿತ್ತು.

ವಿರೋಧ ಪಕ್ಷದದಲ್ಲಿದ್ದಾಗ ವಿರೋಧ ಮಾಡಿದ್ದ ಕಾಂಗ್ರೆಸ್ ಇದೀಗ ಆಡಳಿತ ಪಕ್ಷದಲ್ಲಿದೆ. ಹೀಗಿರುವಾಗ ಅಸೆಂಬ್ಲಿ ಹಾಲ್‌ನಲ್ಲಿರುವ ಸಾವರ್ಕರ್ ಫೋಟೋವನ್ನು ತೆರವುಗೊಳಿಸಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಏನು ಹೇಳಿಕೆ ನೀಡಿಲ್ಲ. ಸ್ಪೀಕರ್ ಯು.ಟಿ ಖಾದರ್ ಕೂಡಾ ಈ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಹೀಗಾಗಿ, ಕಾಂಗ್ರೆಸ್ ಫೋಟೋ ತೆರವುಗೊಳಿಸಲಾಗುತ್ತಾ? ಎಂಬ ಪ್ರಶ್ನೆ ಸಹಜವಾಗಿ ಎಲ್ಲರನ್ನೂ ಕಾಡುತ್ತಿದೆ.

 

ಇದನ್ನು ಓದಿ: Chetan Ahimsa: ಮೀಸಲಾತಿ ಇರುತ್ತಿದ್ದರೆ ಭಾರತ ವಿಶ್ವಕಪ್ ಗೆಲ್ಲುತ್ತಿತ್ತು: ಮತ್ತೆ ನಾಲಿಗೆ ಹರಿಬಿಟ್ಟ ಚೇತನ್ ಅಹಿಂಸಾ!!

Leave A Reply

Your email address will not be published.