Yuva Nidhi: ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್ !!

Karnataka news Congress 5th guarantee yuvanidhi scheme implementation date fix said CM Siddaramaiah

Yuvanidhi scheme implementation : ರಾಜ್ಯ ಸರ್ಕಾರದ ಮಹತ್ವಕಾಂಕ್ಷೀ ಯೋಜನೆಗಳಲ್ಲಿ ಪಂಚ ಗ್ಯಾರಂಟಿಗಳು ಪ್ರಮುಖವಾದವು. ಇವುಗಳ ಪೈಕಿ ಇದೀಗ ಐದನೇ ಗ್ಯಾರಂಟಿಯಾದ ಯುವನಿಧಿಯನ್ನು(Yuvanidhi) ಜನವರಿ ತಿಂಗಳಿಂದ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು(CM Siddaramaiah) ತಿಳಿಸಿದ್ದಾರೆ.

ಹೌದು, ಚುನಾವಣಾ ಪೂರ್ವದಲ್ಲಿ ತಾನು ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಅಂತಯೇ ಅಧಿಕಾರ ಹಿಡಿದ ಬಳಿಕ ಕಾಂಗ್ರೆಸ್ ಸರ್ಕಾರ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು ಇದೀಗ ಐದನೇ ಗ್ಯಾರಂಟಿ ಜಾರಿಗಾಗಿ (Yuvanidhi scheme implementation ) ಸಿದ್ಧತೆ ನಡೆಸಿದೆ. ಅಂತಯೇ ಇದೀಗ ಕಾಂಗ್ರೆಸ್ ಸರ್ಕಾರವು 6 ವರ್ಷ ಪೂರೈಸಿರುವ ಸಮಯದಲ್ಲಿ ಸಿದ್ದರಾಮಯ್ಯನವರು ಹೊಸ ಘೋಷಣೆಯನ್ನು ಮಾಡಿದ್ದು ಮುಂದಿನ 2024ರ ಜನವರಿ ಆರಂಭದಿಂದಲೇ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಅಂದಹಾಗೆ ಈ ಕುರಿತಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಈ ಕುರಿತು ಪೋಸ್ಟ್‌ ಮಾಡಿಕೊಂಡ ಸಿಎಂ ಸಿದ್ದರಾಮಯ್ಯ ಅವರು, ‘ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು. ಇದು ಸಾಧ್ಯವಾಗಬೇಕಾದರೆ ನಿರುದ್ಯೋಗದಿಂದ ಎದುರಾಗುವ ಆರ್ಥಿಕ ಸಮಸ್ಯೆಗಳು ಅವರನ್ನು ಬಾಧಿಸದಂತೆ ತಡೆಯಬೇಕು. ಈ ಕಾರಣಕ್ಕಾಗಿ ನಾವು ಪದವೀಧರ ಮತ್ತು ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆಗೆ ಸರ್ಕಾರ ಜಾರಿಗೆ ಬಂದ ನಂತರದ ಮೊದಲ ಸಂಪುಟ ಸಭೆಯಲ್ಲಿಯೇ ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ. ಈ ಯೋಜನೆ ಜನವರಿಯಿಂದ ಜಾರಿಗೆ ಬರಲಿದ್ದು, ಸುಮಾರು ನಾಲ್ಕೂವರೆ ಲಕ್ಷ ಯುವಜನತೆಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Yatindra-CM Siddaramaiah: ಯತೀಂದ್ರ- ಸಿದ್ದರಾಮಯ್ಯ ಆಡಿಯೋ ಪ್ರಕರಣಕ್ಕೆ ರೋಚಕ ಟ್ವಿಸ್ಟ್- ಪೋಲೀಸ್ ವರ್ಗಾವಣೆಗಳಲ್ಲಿ ಬಯಲಾಯ್ತು ಅಪ್ಪ-ಮಗನ ರಹಸ್ಯ!!

Leave A Reply

Your email address will not be published.