7th Pay Commission: 7ನೇ ವೇತನ ಆಯೋಗ ಅವಧಿ ವಿಸ್ತರಣೆ – ಕಾದು ಕಾದು ಸುಸ್ತಾದ ಸರ್ಕಾರಿ ನೌಕರರಿಂದ ಮಹತ್ವದ ನಿರ್ಧಾರ !!

Karnataka govt news 7th state pay commission term extended government employees questioned

7th Pay Commission: ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಬಹುದೊಡ್ದ ಶಾಕ್ ನೀಡಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಎದುರು ನೋಡುತ್ತಿದ್ದ ಮಂದಿಗೆ ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ರಾಜ್ಯ ಸರ್ಕಾರ ಕೆ. ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗದ(7th Pay Commission) ಅವಧಿಯನ್ನು 15.03.2024ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ದಿನಾಂಕ 19/11/2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ್ದರು. ಇದಾದ ಬಳಿಕ,7ನೇ ರಾಜ್ಯ ವೇತನ ಆಯೋಗದ (7th Pay Commission Updates) ಕಾಲಾವಧಿಯನ್ನು ದಿನಾಂಕ 18/11/202ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು. ಈಗ ಸರ್ಕಾರ 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ನೆರವಾಗುವ ನಿಟ್ಟಿನಲ್ಲಿ 15/3/2024ರವರೆಗೆ ಆಯೋಗದ ಕಾಲಾವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 29ರಂದು ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಹಾಗೂ ಸದಸ್ಯರ ನಿಯೋಗ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದ ಹಿನ್ನೆಲೆ ಆಯೋಗ ವರದಿಯನ್ನು ನವೆಂಬರ್‌ನಲ್ಲಿಯೇ ನೀಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಕರ್ನಾಟಕ ಸರ್ಕಾರ ನವೆಂಬರ್‌ನಲ್ಲಿಯೇ 7ನೇ ರಾಜ್ಯ ವೇತನ ಆಯೋಗದ ವರದಿ ಸ್ವೀಕರಿಸಲಿದೆ ಎಂಬ ನಿರೀಕ್ಷೆ ಕೂಡ ನೌಕರರಿಗಿತ್ತು. ಆದರೆ ವೇತನ ಆಯೋಗದ ಅವಧಿಯನ್ನು 2024ರ ಮಾರ್ಚ್‌ ತನಕ ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ, ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ನಿರಾಶೆ ಮೂಡಿಸಿದೆ.

ಇದನ್ನೂ ಓದಿ: Marriage Registration: ಹೊಸದಾಗಿ ಮದುವೆ ಆಗೋರಿಗೆ ದೇಶಾದ್ಯಂತ ಬಂತು ಹೊಸ ರೂಲ್ಸ್ – ಇನ್ಮುಂದೆ ಈ ಕೆಲಸ ಕಡ್ಡಾಯ!!

Leave A Reply

Your email address will not be published.