Indira Canteen: ಈ ಕಾಲೇಜಿನ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್- ‘ಕ್ಯಾಂಪಸ್’ಗೆ ಎಂಟ್ರಿ ಕೊಡಲಿದೆ ಇಂದಿರಾ ಕ್ಯಾಂಟೀನ್ !!
Karnataka news Good news for mysuru students Indira canteen coming soon at college
Indira canteen: ಮೈಸೂರು ಕಾಲೇಜು ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಆಹಾರ ಸಿಗಬೇಕೆಂಬ ನಿಟ್ಟಿನಲ್ಲಿ ಮೈಸೂರು ನಗರದಲ್ಲಿ ಹೆಚ್ಚುವರಿಯಾಗಿ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು (Indira canteen)ಶೀಘ್ರ ಪ್ರಾರಂಭ ಮಾಡಲು ಚಿಂತನೆ ನಡೆಸಲಾಗಿದೆ.
ಮೈಸೂರು ಕಾಲೇಜಿನ ಎಲ್ಲಾ ಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ಕಾಲೇಜು ಆವರಣದಲ್ಲಿಯೇ ಹೊಸದಾಗಿ ಇಂದಿರಾ ಕ್ಯಾಂಟಿನ್ ಆರಂಭಿಸಲು ಮೈಸೂರು ಮಹಾನಗರ ಪಾಲಿಕೆ( Mysrore MahaNagara Palike)ತೀರ್ಮಾನ ಕೈಗೊಳ್ಳಲಾಗಿದೆ. ಬಡವರ ಹಸಿವು ನೀಗಿಸುತ್ತಿರುವ ನಿಟ್ಟಿನಲ್ಲಿ ಕಡಿಮೆ ದರದಲ್ಲಿ ಊಟ , ತಿಂಡಿ ಕೊಡುವ ಇಂದಿರಾ ಕ್ಯಾಂಟೀನ್ (Indira Canteen)ಇನ್ನು ಮುಂದೆ ಮೈಸೂರಲ್ಲಿ ಎರಡು ಕಾಲೇಜು ಆವರಣದಲ್ಲಿ ಆರಂಭ ಆಗಲಿದೆ.
ಸಾವಿರಾರು ವಿದ್ಯಾರ್ಥಿಗಳಿಗೆ ಅನ್ನ ಆಹಾರ ದೊರೆತಿದೆ. ವಾಲ್ಮೀಕಿ ರಸ್ತೆಯಲ್ಲಿರುವ 4000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುವ ಮಹಾರಾಣಿ ವಾಣಿಜ್ಯ ಕಾಲೇಜಿನ ಆವರಣ ಮತ್ತು ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡುವ ಮಾನಸ ಗಂಗೋತ್ರಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭ ಮಾಡಲಾಗುತ್ತದೆ. ಮಹಾರಾಣಿ ಕಾಲೇಜು ಮುಖ್ಯಸ್ಥರು ಹಾಗೂ ಮೈಸೂರು ವಿವಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ಕುರಿತು ತೀರ್ಮಾನ ಮಾಡಲಾಗುತ್ತದೆ. ಇದರ ಜೊತೆಗೆ ಜಾಗವನ್ನು ಗುರುತಿಸಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ನಾನಾ ಸ್ನಾತಕೋತ್ತರ ಪದವಿಯ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಊಟ ದೊರೆಯುವ ನಿಟ್ಟಿನಲ್ಲಿ ವಿವಿ ಅಧಿಕಾರಿಗಳೊಂದಿಗೆ ಪಾಲಿಕೆ ಸಮಾಲೋಚನೆ ನಡೆಸಿ ಗಂಗೋತ್ರಿ ಆವರಣದಲ್ಲಿ ಈಗಾಗಲೇ ಒಂದು ಕ್ಯಾಂಟೀನ್ ನಡೆಸಲಾಗುತ್ತಿದೆ. ಮಹಾರಾಣಿ ಕಾಲೇಜು, ಮಾನಸ ಗಂಗೋತ್ರಿಯಲ್ಲಿ ಅತೀ ಶೀಘ್ರದಲ್ಲೇ ಎರಡು ಕ್ಯಾಂಟೀನ್ ಶುರುವಾಗಲಿದೆ. ಕ್ಯಾತಮಾರನಹಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಹಂತದಲ್ಲಿದ್ದು, ಅಜೀಜ್‌ಸೇಠ್ ಜೋಡಿ ರಸ್ತೆಯಲ್ಲಿರುವ ಕ್ಯಾಂಟೀನ್ ಆರಂಭವಾಗಿಲ್ಲ. ಆದಾಗ್ಯೂ, ಇವುಗಳ ಆರಂಭಕ್ಕೂ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಗ್ಯಾಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.