MP Nalin Kumar Kateel :ನಾನು ಈ ಕೆಲಸ ಮಾಡಿಯೇ ಇಲ್ಲ ಎಂದು ಕಟೀಲು ದೇವರ ಮೇಲೆ ನಳಿನ್ ಕುಮಾರ್ ಪ್ರಮಾಣ – ಯಾವ ಕೆಲಸವದು ?!

Political news MP Nalin Kumar Kateel life says not recieved money in political life

MP Nalin Kumar Kateel: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(MP Nalin Kumar Kateel) ಆಣೆ-ಪ್ರಮಾಣಕ್ಕೆ ಮುಂದಾಗಿದ್ದಾರೆ. ರಾಜಕೀಯ ಜೀವನದಲ್ಲಿ ಯಾರ ಬಳಿಯೂ ಹಣ ಪಡೆದಿಲ್ಲ ಎಂಬುದು ಕಟೀಲು ದೇವಿಯ ಮೇಲೆ ನಳಿನ್ ಕುಮಾರ್ ಕಟೀಲ್‌ ಪ್ರಮಾಣ ಮಾಡಿದ್ದಾರೆ.

 

ನಾನು ರಾಜಕೀಯಕ್ಕೆ ಬಂದು 20 ವರ್ಷವಾಗಿದ್ದು, ದ.ಕ ಜಿಲ್ಲೆಯ ಬಂಟ್ವಾಳದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದ ಸಂದರ್ಭ ನಳಿನ್‌ ಕುಮಾರ್ ಕಟೀಲ್ ಅವರು ಇಲ್ಲಿಯವರೆಗೆ ಯಾರ ಬಳಿಯೂ ನಾನು ಒಂದು ರೂ. ಮುಟ್ಟಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ನಾನು ಕಟೀಲಿನ ದೇವರನ್ನು ಬಲವಾಗಿ ನಂಬುತ್ತೇನೆ. ಸಂಸದನಾಗಿದ್ದ ಸಂದರ್ಭದಲ್ಲಿ ನಾನು ಯಾರಿಂದಲು ಹಣ ಪಡೆದಿಲ್ಲ ಅಂತ ಕಟೀಲು ದೇವರ ಮೇಲೆ ಪ್ರಮಾಣ ಮಾಡುತ್ತಿದ್ದಾರೆ.

ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ. ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ. ನನಗೆ ಈ ದೇಶದಲ್ಲಿ ಮೋದಿ ಪ್ರಧಾನಿ ಆಗಬೇಕು ಎನ್ನುವುದೇ ಗುರಿಯಾಗಿದ್ದು, ಮುಂದಿನ ಗುರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಬೇಕು ಎನ್ನುವುದೇ ತನ್ನ ಉದ್ದೇಶವಾಗಿದೆ. ಯಾವುದೇ ಅಧಿಕಾರಿ, ಗುತ್ತಿಗೆದಾರರ ಬಳಿ ಹಣ ಪಡೆದಿಲ್ಲ. ಹಿಂದೂ ಸಮಾಜಕ್ಕೆ ಅನ್ಯಾಯವಾದ ಸಂದರ್ಭ ಹೋರಾಟ ಮಾಡಿದ್ದು, ಅಧಿಕಾರವೇ ನಮಗೆ ರಾಜಕಾರಣವಲ್ಲ. ನಮ್ಮ ಗುರಿ ಸರ್ವಶ್ರೇಷ್ಠವಾಗಿದ್ದು, ನಾಲ್ಕುವರೆ ವರ್ಷಗಳವರೆಗೆ ಯಾವುದೇ ಆರೋಪಗಳಿಗೆ ನಾನು ತುತ್ತಾಗಿಲ್ಲ. ಯಾವುದೇ ಗುಂಪುಗಾರಿಕೆ ಮಾಡದೇ ಸಾಮಾನ್ಯ ಕಾರ್ಯಕರ್ತನಂತೆ ಇದ್ದೇನೆ ಎಂದಿದ್ದಾರೆ.

Leave A Reply

Your email address will not be published.