DK Shivakumar: ಡಿಕೆಶಿ ವಿರುದ್ಧದ CBI ತನಿಖೆ ವಿಚಾರ- ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ !!

DK Shivakumar: ಬೆಂಗಳೂರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಗಳು, ಡಿಸಿಎಂ ವಿರುದ್ಧ ಆರೋಪದ ತನಿಖೆ ನಡೆಸಲು ಸಿಬಿಐಗೆ ನೀಡಿದ ಅನುಮತಿ ಹಿಂಪಡೆಯಲು ತೀರ್ಮಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಸರ್ಕಾರದ ಸೇವೆಯಲ್ಲಿದ್ದವರ ವಿರುದ್ಧ ತನಿಖೆಯಾಗಬೇಕಾದರೆ ಸರ್ಕಾರದ ಅನುಮತಿ ಅವಶ್ಯಕ ಎಂದರು.

ಮುಖ್ಯವಾಗಿ ಡಿ ಕೆ ಶಿವಕುಮಾರ್ (DK Shivakumar)ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆಯದೇ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೇ ಹಿಂದಿನ ಸರ್ಕಾರದ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿರುವುದು ಕಾನೂನು ಬಾಹಿರ ಎಂದು ತಿಳಿಸಿದರು.

2019 ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕವಾಗಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಅವರ ಮೌಖಿಕ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಸಿಬಿಐ ತನಿಖೆಗೆ ವಹಿಸಿದ್ದಾರೆ. ಈ ರೀತಿ ಮಾಡುವುದು ಕಾನೂನಿನ ರೀತ್ಯ ಸರಿಯಲ್ಲ ಎಂದರು.

ಇನ್ನು ನ್ಯಾಯಾಲಯದ ತೀರ್ಮಾನದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರ ಕಾನೂನುಬಾಹಿರವಾಗಿ ಮಂಜೂರಾತಿ ನೀಡಿರುವುದರಿಂದ ಅದು ನ್ಯಾಯವಲ್ಲ . ಅದನ್ನು ವಾಪಸ್ಸು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿ: Birth- Death Registeration:ರಾಜ್ಯದ ಜನತೆಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ- ಜನನ, ಮರಣ ನೋಂದಣಿ ಶುಲ್ಕದಲ್ಲಿ ಭಾರೀ ಹೆಚ್ಚಳ !!

Leave A Reply

Your email address will not be published.