Gruha Lakshmi Yojana: ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ- ಇನ್ನು ಇವರ ಖಾತೆಗೆ ಜಮಾ ಆಗುತ್ತೆ ಹಣ !!

Share the Article

Gruha Lakshmi Yojana Updates: ಗ್ಯಾರಂಟೀ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವಾಗಿದ್ದ ರಾಜ್ಯ ಸರ್ಕಾರ ಇದೀಗ, ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ (Gurha Lakshmi Yojana)ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ‌ ನೇರ ವರ್ಗಾವಣೆ (DBT)ಜಮೆ ಮಾಡಲಾಗುತ್ತಿದೆ.

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ(Gruha Lakshmi Yojana) ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಲ್ಲ ನೆರವು ತಲುಪಿಸುವ ನಿಟ್ಟಿನಲ್ಲಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಕುಟುಂಬದ ಯಜಮಾನಿಯ ಅನುಪಸ್ಥಿತಿಯಲ್ಲಿ 2 ನೇ ಹಿರಿಯ ಗೃಹಿಣಿ ಖಾತೆಗೆ 2,000 ರೂ. ನೆರವಿನ ಹಣ ದೊರೆಯಲಿದೆ. ಅದೇ ರೀತಿ, ಅನ್ನಭಾಗ್ಯ ಯೋಜನೆ ಮೂಲಕ ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ 2 ನೇ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನು ಓದಿ: DK Shivakumar: ಡಿಕೆಶಿ ವಿರುದ್ಧದ CBI ತನಿಖೆ ವಿಚಾರ- ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ !!

Leave A Reply