Doorstep Medicine Supply: ಜನಸಾಮಾನ್ಯರಿಗೆ ಗ್ಯಾರಂಟಿ ಬಳಿಕ ಮತ್ತೊಂದು ಗುಡ್ ನ್ಯೂಸ್- ಇನ್ಮುಂದೆ ಇಂತವರ ಮನೆ ಬಾಗಿಲಿಗೇ ಬರುತ್ತೆ ಈ ಎಲ್ಲಾ ಸೌಲಭ್ಯ !!

Doorstep Medicine Supply: ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ (Good News)ನೀಡಿದೆ.ರಾಜ್ಯದ ಜನ ಸಾಮಾನ್ಯರ ಮನೆ ಬಾಗಿಲಿಗೆ ಆರೋಗ್ಯ ಸೇವೆ(Health Service)ತಲುಪಿಸುವ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆ ರೂಪಿಸಿದೆ. ಉಚಿತವಾಗಿ ಜನರ ಮನೆ ಬಾಗಿಲಿಗೆ ಔಷಧ ಪೂರೈಕೆ (Medicine Supply)ಮಾಡಲಾಗುತ್ತದೆ.

ರಾಜ್ಯ ಸರ್ಕಾರದ ಗೃಹ ಆರೋಗ್ಯ ಯೋಜನೆ ಮೂಲಕ ವೈದ್ಯರ ತಂಡ ಪ್ರತಿ ಮನೆಗೆ (Doorstep Medicine Supply)ತೆರಳಿ ರಕ್ತದೊತ್ತಡ, ಮಧುಮೇಹ, ಮೂರು ಬಗೆಯ ಸಾಮಾನ್ಯ ಕ್ಯಾನ್ಸರ್ ಕಾಯಿಲೆ ಪರೀಕ್ಷೆ ನಡೆಸಲು ಯೋಜನೆ ರೂಪಿಸಿದ್ದು, ಪ್ರಾಯೋಗಿಕವಾಗಿ ಚಿಕ್ಕಮಗಳೂರು ಜಿಲ್ಲೆಯ ಹಿರೇಗೌಜ ಮತ್ತು ಲಕ್ಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಗೃಹ ಆರೋಗ್ಯ ಯೋಜನೆ ಪ್ರಾರಂಭ ಮಾಡಲಾಗುತ್ತದೆ.

ಬಿಪಿ, ಮಧುಮೇಹ ರೋಗಿಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಮಾಸಿಕ ಶಿಬಿರದಲ್ಲಿ ತಪಾಸಣೆ ನಡೆಸಲಾಗುತ್ತದೆ. ಅಂಗನವಾಡಿ, ಶಾಲೆ, ಪಂಚಾಯಿತಿ ಕಟ್ಟಡ ಮೊದಲಾದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ವೈದ್ಯಾಧಿಕಾರಿಗಳ ತಂಡ ಶಿಬಿರ ನಡೆಸಲಿದೆ.ಪ್ರತಿದಿನ ಮಧ್ಯಾಹ್ನ ಮತ್ತು ಬೆಳಗಿನ ಅವಧಿಯಲ್ಲಿ ವಾರದಲ್ಲಿ ಮೂರು ದಿನ ಆರೋಗ್ಯ ಸಿಬ್ಬಂದಿ 20 ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ.

ಮೊದಲ ಹಂತದಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತದೆ.ರಾಮನಗರ, ಬೆಳಗಾವಿ, ಗದಗ, ತುಮಕೂರು, ಬಳ್ಳಾರಿ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ಯೋಜನೆ ಜಾರಿಗೆ ಬರಲಿದೆ. 30 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರ ಪ್ರತಿ ಮನೆಗೆ ತೆರಳಿ ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಪರೀಕ್ಷೆ ನಡೆಸಲಾಗುತ್ತದೆ. ಈ ಎಲ್ಲ ರೋಗಲಕ್ಷಣಗಳು ಕಂಡು ಬಂದರೆ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರ ಅಥವಾ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು ತಪಾಸಣೆ ನಡೆಸಿ ಮುಂದಿನ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನು ಓದಿ: Gadaga Crime News: ಏನೂ ಅರಿಯದ 9 ತಿಂಗಳ ಪುಟ್ಟ ಕಂದನಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ ಮಾಡಿದ ಅಜ್ಜಿ, ಸೊಸೆ ಆರೋಪ!! ಕಾರಣವೇನು ಗೊತ್ತೇ?

1 Comment
Leave A Reply

Your email address will not be published.