D.K: ಅಕ್ಕಪಕ್ಕದ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ!
Bantwala missing case young women and men missing on same day latest news
Bantwala: ಸಜೀಪಮುನ್ನೂರು ಗ್ರಾಮದಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಯುವತಿ ಒಂದೇ ದಿನ ನಾಪತ್ತೆಯಾಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಎರಡೂ ಮನೆಯವರು ದೂರು ನೀಡಿದ್ದು, ಬಂಟ್ವಾಳ (Bantwala) ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರಿ ಆಯಿಷತ್ ರಸ್ಮಾ (18) ಹಾಗೂ ಹೈದರ್ ಅವರ ಪುತ್ರ ಮಹಮ್ಮದ್ ಸಿನಾನ್ (23) ನಾಪತ್ತೆಯಾದವರು.
ನ.23 ರಂದು ಊಟ ಮಾಡಿ ಮಲಗಿದ್ದು, ಮರುದಿನ ಬೆಳಗ್ಗೆ ನೋಡಿದಾಗ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ. ರಸ್ಮಾ ನಡುಪದುವ ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯರ್ಥಿನಿಯಾಗಿದ್ದು, ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು ನಂತರ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಇದೂಗ ಇಬ್ಬರೂ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ವೀಡಿಯೋದಲ್ಲಿ ಸ್ಫೋಟಕ ಅಂಶ ಬಹಿರಂಗ!!