B Y Vijayendra: ರಾಜ್ಯ ಬಿಜೆಪಿ ಕಾರ್ಯಕರ್ತರಿಗೆ ಭರ್ಜರಿ ಗುಡ್ ನ್ಯೂಸ್- ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಹೊಸ ಘೋಷಣೆ !!

Karnataka Political news good news for state BJP workers b y Vijayendra new announcement

Share the Article

B Y Vijayendra : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯುವ ನಾಯಕ ಬಿ ವೈ ವಿಜಯೇಂದ್ರ(B Y Vijayendra) ಅವರನ್ನು ಆಯ್ಕೆ ಮಾಡಿರುವುದು ನಾಡಿನ ಅನೇಕ ಯುವ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದೆ. ರಾಜ್ಯದಲ್ಲಿ ಮಂಕಾಗಿದ್ದ ಬಿಜೆಪಿ(BJP) ಇದೀಗ ಮತ್ತೆ ಹುರುಪುಗೊಂಡಿದೆ. ಈ ನಡುವೆಯೇ ವಿಜಯೇಂದ್ರ ಅವರು ಬಿಜೆಪಿ ಕಾರ್ಯಕರ್ತರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.

ಹೌದು, ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ವಿಜಯೇಂದ್ರ ಅವರು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಅಂತೆಯೇ ಇದೀಗ ಮತ್ತೊಂದು ಹೊಸ ಘೋಷಣೆಯನ್ನು ಹೊರಡಿಸಿದ್ದು ಪೊಲೀಸರಿಂದ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರಿಗೆ ಕಾನೂನು ನೆರವಾಗಲು ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್​ ರೂಂ ತೆರೆಯುವುದಾಗಿ ತಿಳಿಸಿದ್ದಾರೆ.

ಅಂದಹಾಗೆ ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ ಪೊಲೀಸರ ಕಿರುಕುಳದ ಬಗ್ಗೆ ದೂರು ಸ್ವೀಕರಿಸಲು ವಿರೋಧ ಪಕ್ಷವಾದ ಬಿಜೆಪಿಯು ತನ್ನ ಕಾರ್ಯಕರ್ತರು ಮತ್ತು ಮುಖಂಡರಿಗೆ ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು (ಕಂಟ್ರೋಲ್​ ರೂಂ) ತೆರೆಯಲಿದೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ‘ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ. ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: New rules for bikers: ಬೈಕ್ ಸವಾರರಿಗೆ ಬಂತು ಹೊಸ ಟಫ್ ರೂಲ್ಸ್ – ನಂಬರ್ ಪ್ಲೇಟ್ ವಿಚಾರದಲ್ಲಿ ಈ ಕೆಲಸ ಮಾಡಿದ್ರೆ ನಿಮಗಿನ್ನು ಜೈಲು ಫಿಕ್ಸ್ !!

Leave A Reply