Karnataka Police Constable Exam: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ – ಡಿ. 10ರಂದು ಈ ಜಿಲ್ಲೆಗಳಲ್ಲಿ ನಡೆಯಲಿದೆ ಲಿಖಿತ ಪರೀಕ್ಷೆ
Karnataka government job news Karnataka police constable recruitment 2023 exam updates
Karnataka Police Constable Exam: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 454 ಪೊಲೀಸ್ ಕಾನ್ಸ್‌ಟೇಬಲ್(CIvil)ಹುದ್ದೆಗಳಿಗೆ ನೇಮಕಾತಿ ಕುರಿತಂತೆ ಡಿ.10ರಂದು ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ರಾಜ್ಯದ ಪರೀಕ್ಷಾ ಕೇಂದ್ರಗಳಲ್ಲಿ(Karnataka Police Constable Exam) ಲಿಖಿತ ಪರೀಕ್ಷೆ ನಿಗದಿ ಮಾಡಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 454 ಪೊಲೀಸ್ ಕಾನ್ಸ್‌ಟೇಬಲ್(CIvil)ಹುದ್ದೆಗಳಿಗೆ ನೇಮಕಾತಿಯ ಸಲುವಾಗಿ ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆ, ಕಲಬುರಗಿ ನಗರ, ಕಲಬುರಗಿ ಜಿಲ್ಲೆ, ಯಾದಗಿರಿ ಜಿಲ್ಲೆ, ರಾಯಚೂರು ಜಿಲ್ಲೆ, ಕೊಪ್ಪಳ ಜಿಲ್ಲೆ, ಬಳ್ಳಾರಿ ಜಿಲ್ಲೆ ಮತ್ತು ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಮುಂಬರುವ ದಿನಗಳಲ್ಲಿ ಅರ್ಹ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಸಂದೇಶ (Message)ಮುಖಾಂತರ ಮಾಹಿತಿ ನೀಡಲಾಗುತ್ತದೆ. ಕರೆಪತ್ರ ಲಿಂಕ್ ಅನ್ನು ಕೂಡ ರವಾನೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕರೆಪತ್ರ ಡೌನ್‌ಲೋಡ್ ಮಾಡಿಕೊಂಡು ನಿಗದಿತ ದಿನಾಂಕದ ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (PSI)ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಆದೇಶಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಹಸಿರು ನಿಶಾನೆ ನೀಡಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ಡಿಸೆಂಬರ್ 23ರಂದು ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆಸುವ ಕುರಿತು ಪರೀಕ್ಷೆ ಕುರಿತು ಬುಧವಾರ ಪ್ರಕಟಿಸಿದ್ದು ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ ಎಂದು ತಿಳಿದುಬಂದಿದೆ.