Pneumonia Case: ಚೀನಾದಲ್ಲಿ ನಿಗೂಢ ನ್ಯುಮೋನಿಯಾ ಸೋಂಕು ಹೆಚ್ಚಳ ಭೀತಿ: ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಕೇಂದ್ರ ಇಲಾಖೆ ಸೂಚನೆ!!

Health news China Virus Pneumonia Infection Indian Govt alert to six states including Karnataka

Pneumonia Infection: ಚೀನಾದಲ್ಲಿ ನಿಗೂಢ ನ್ಯುಮೋನಿಯಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ, ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಎಚ್ಚರಿಕೆ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಾಖಂಡ, ಹರಿಯಾಣ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆಗಳ ಕುರಿತು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಹೊರಡಿಸಲಾಗಿದೆ.

ಕೋವಿಡ್ ಪ್ರಕರಣಗಳ ನಿರ್ವಹಣೆಗೆ ಆಸ್ಪತ್ರೆಯಲ್ಲಿ ಅಳವಡಿಸಿಕೊಳ್ಳಲಾಗಿರುವ ವ್ಯವಸ್ಥೆಯನ್ನು ಮರುಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಹಾಸಿಗೆ, ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟ‌ರ್, ಔಷಧ, ಪಿಪಿಇ ಕಿಟ್, ಎನ್95 ಮಾಸ್ಕ್ ಮೆಡಿಕಲ್‌ ಮಾಸ್ಕ್ ಪ್ರಯೋಗಾಲಯ, ಆಂಬ್ಯುಲೆನ್ಸ್‌ ಮತ್ತಿತರ ವ್ಯವಸ್ಥೆಯನ್ನು ಮಕ್ಕಳ ಹಾಗೂ ವಯಸ್ಕರ ನ್ಯುಮೋನಿಯಾ ಚಿಕಿತ್ಸೆಗೆ ಸಿದ್ಧಪಡಿಸಲು ಸೂಚಿಸಲಾಗಿದೆ. ಭ್ರೂಣ ಹತ್ಯೆ ಪ್ರಕರಣ ಸೇರಿದಂತೆ ಇನ್ ಫ್ಲುಯೆಂಜಾ ತಡೆಗಟ್ಟುವ ಜೊತೆಗೆ ಉತ್ತರ ಚೀನಾದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ (Pneumonia Infection)ರಾಜ್ಯದಲ್ಲಿ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಕರ್ನಾಟಕ ಆರೋಗ್ಯ ಇಲಾಖೆ ಕೂಡ ಹೆಚ್ಚಿನ ಮುಂಜಾಗೃತ ಕ್ರಮವಾಗಿ ಕಾಲೋಚಿತ ಜ್ವರದ ಬಗ್ಗೆ ನಾಗರಿಕರಲ್ಲಿ ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ಜ್ವರದ ಲಕ್ಷಣಗಳು ಮತ್ತು ಅಪಾಯಕಾರಿ ಅಂಶಗಳ ಬಗ್ಗೆ ಪಟ್ಟಿ ಮಾಡಲಾಗಿದ್ದು, ಕೆಮ್ಮುವಾಗ ಇಲ್ಲವೇ ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಬೇಕಾಗುತ್ತದೆ. ಕೈಗಳನ್ನು ತೊಳೆಯುವುದು, ಮುಖವನ್ನು ಸ್ಪರ್ಶಿಸುವುದನ್ನು ತಪ್ಪಿಸುವುದು ಮತ್ತು ಜನಸಂದಣಿ ಸ್ಥಳಗಳಲ್ಲಿ ಮಾಸ್ಕ್ ಬಳಸಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗುವ ಎಲ್ಲಾ ಸಾರಿ ಹಾಗೂ ಐಎಲ್‌ಐ ಪ್ರಕರಣಗಳ ಸಂಪೂರ್ಣ ಮಾಹಿತಿಯನ್ನು ಪ್ರತಿನಿತ್ಯ ಐಡಿಎಸ್‌ಪಿ ಐಹೆಚ್‌ಐಪಿ ವೆಬ್‌ಸೈಟ್‌ಗೆ ಆಪ್‌ಲೋಡ್ ಮಾಡಬೇಕು. ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: RBI: ಸಿಟಿ ಮತ್ತು ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಖಾತೆ ಹೊಂದಿದವರಿಗೆ ಬಿಗ್ ಶಾಕ್ – ಭಾರೀ ಮೊತ್ತದ ದಂಡ ವಿಧಿಸಿದ RBI

Leave A Reply

Your email address will not be published.