Basavana gouda yatnal: ಡಿ ಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್ – ಕಾರಣ ಮಾತ್ರ ಅಚ್ಚರಿ !!

Karnataka political news MLA basanagouda Patil yatnal to High court against DK Shivakumar latest news

Basanagouda yatnal: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹಿಂದಿನ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರಕಾರವು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು ಈ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌(Basanagouda yatnal) ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹೌದು, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D K Shivkumar) ಅವರನ್ನು ಭಿಗಿಯಾಗಿ ಸುತ್ತಿಕೊಳ್ಳುತ್ತಿದೆ. ಇದನ್ನು ಸಡಿಲಿಸುವ ನಿಟ್ಟಿನಲ್ಲಿ ಡಿಕೆಶಿ ವಿರುದ್ಧ ತನಿಖೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರ CBIಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗಿದೆ. ಇದೀಗ ಇದನ್ನು ವಿರೋಧಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಅಂದಹಾಗೆ ಡಿ.ಕೆ.ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಹೈಕೋರ್ಟ್‌ನಲ್ಲಿ (Karnataka High Court) ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಯತ್ನಾಳ್ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಆದೇಶ ಪೂರ್ವಾಗ್ರಹ ಪೀಡಿತ ಎಂದು ಅರ್ಜಿಯಲ್ಲಿ ಯತ್ನಾಳ್ ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಏನಂದ್ರು?
ಇನ್ನು ಸರ್ಕಾರದ ನಡೆಯನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋದ ಯತ್ನಾಳ್ ನಡೆಯ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ(CM Siddaramaiah) ಅವರು ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ, ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Mumbai: ಅಗ್ನಿವೀರ್ ತರಭೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ- ಮರುಕ ಹುಟ್ಟಿಸುತ್ತೆ ಕಾರಣ!!

Leave A Reply

Your email address will not be published.